ದಾವಣಗೆರೆ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದಾವಣಗೆರೆಗೆ ಆಗಮಿಸುತ್ತಿದ್ದು, ದಾವಣಗೆರೆಯಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಮಂತ್ರಿ ಮೋದಿ ಅವರು ಇಂದು ದಾವಣಗೆರೆಗೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸುವುದರಿಂದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಏಪ್ರಿಲ್ 28 ರ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ದಾವಣಗೆರೆ ಹಾಗೂ ಹರಿಹರ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.