ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಮೂರು ದಿನಗಳ ಗುಜರಾತ್ ಪ್ರವಾಸಕ್ಕೆ ಸಿದ್ಧರಾಗಿದ್ದಾರೆ. ರಾಜ್ಯಾದ್ಯಂತ ಬರೋಬ್ಬರಿ 14 ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಅ. 9 ರಂದು, ಸಂಜೆ 5:30 ಕ್ಕೆ, ಪ್ರಧಾನಿ ಮೋದಿ ಅವರು ಮೆಹ್ಸಾನಾದ ಮೊಧೇರಾದಲ್ಲಿ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಅಕ್ಟೋಬರ್ 10 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಧಾನಮಂತ್ರಿಯವರು ಭರೂಚ್ನ ಅಮೋದ್ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3:15ಕ್ಕೆ ಅಹಮದಾಬಾದ್ನಲ್ಲಿ ಮೋದಿ ಶೈಕ್ಷಣಿಕ ಸಂಕುಲವನ್ನು ಉದ್ಘಾಟಿಸಲಿದ್ದಾರೆ. ಸಂಜೆ 5:30ಕ್ಕೆ ಪ್ರಧಾನಮಂತ್ರಿಯವರು ಜಾಮ್ನಗರದಲ್ಲಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಅಕ್ಟೋಬರ್ 11 ರಂದು, ಮಧ್ಯಾಹ್ನ 2:15 ಕ್ಕೆ, ಅಹಮದಾಬಾದ್ನ ಸಿವಿಲ್ ಹಾಸ್ಪಿಟಲ್ ಅಸರ್ವಾದಲ್ಲಿ ಯೋಜನೆಗಳ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿ ಮಾಡಲಿದ್ದಾರೆ. ನಂತರ ಅವರು ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಉಜ್ಜಯಿನಿಯಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ. ನಂತರ ಪ್ರಧಾನಿ ಮೋದಿ ಅಲ್ಲಿಂದ ಮಧ್ಯಪ್ರದೇಶಕ್ಕೆ ತೆರಳಲಿದ್ದಾರೆ.
ಡಿಸೆಂಬರ್ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನವೇ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸುಮಾರು ಮೂರು ದಶಕಗಳ ಕಾಲ ಆಡಳಿತ ನಡೆಸಿದೆ.