ನವದೆಹಲಿ : ಡಿಸೆಂಬರ್ 11 ರಂದು ಪ್ರಧಾನಿ ಮೋದಿಯವರು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸಮೃದ್ಧಿ ಮಹಾಮಾರ್ಗ್, ಏಮ್ಸ್, ವಂದೇ ಭಾರತ್ ರೈಲು ಮತ್ತು ಉಳಿದ ಮೆಟ್ರೋ ರೈಲಿನ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.
ಡಿ. 11 ರಂದು ಪ್ರಧಾನ ಮಂತ್ರಿ ಅವರು ನಾಗ್ಪುರ ರೈಲು ನಿಲ್ದಾಣವನ್ನು ತಲುಪಲಿದ್ದು, ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಗೆ ಅವರು ಫ್ರೀಡಂ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಖಾಪ್ರಿ ಮೆಟ್ರೋ ನಿಲ್ದಾಣಕ್ಕೆ ಮೆಟ್ರೋ ಸವಾರಿ ಮಾಡುತ್ತಾರೆ.
ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿಯವರು ‘ನಾಗ್ಪುರ ಮೆಟ್ರೋ ಹಂತ- II’ ಗೆ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ.
ನಂತರ ನಾಗ್ಪುರದಲ್ಲಿ ಬೆಳಗ್ಗೆ 11:30ರ ಸುಮಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿಯವರು 1500 ಕೋಟಿಗೂ ಹೆಚ್ಚು ಮೊತ್ತದ ರಾಷ್ಟ್ರ ರೈಲು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅವರು ನಾಗ್ಪುರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಒನ್ ಹೆಲ್ತ್ (ಎನ್ಐಒ) ಮತ್ತು ನಾಗಪುರದ ನಾಗ್ ನದಿ ಮಾಲಿನ್ಯ ನಿವಾರಣೆ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರು ‘ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ & ಟೆಕ್ನಾಲಜಿ (CIPET), ಚಂದ್ರಾಪುರ’ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಹಿಮೋಗ್ಲೋಬಿನೋಪತಿಯ ಸಂಶೋಧನೆ, ನಿರ್ವಹಣೆ ಮತ್ತು ನಿಯಂತ್ರಣ ಕೇಂದ್ರ, ಚಂದ್ರಾಪುರ’ವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ.
ಇದಾದ ಬಳಿಕ ಗೋವಾದಲ್ಲಿ, ಮಧ್ಯಾಹ್ನ 3:15 ರ ಸುಮಾರಿಗೆ, ಪ್ರಧಾನ ಮಂತ್ರಿಗಳು 9 ನೇ ವಿಶ್ವ ಆಯುರ್ವೇದ ಕಾಂಗ್ರೆಸ್ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಮೂರು ರಾಷ್ಟ್ರೀಯ ಆಯುಷ್ ಸಂಸ್ಥೆಗಳನ್ನು ಉದ್ಘಾಟಿಸಲಿದ್ದಾರೆ. ಸಂಜೆ 5:15 ರ ಸುಮಾರಿಗೆ ಪ್ರಧಾನಿಯವರು ಗೋವಾದ ಮೋಪಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.
ವಿಶ್ವದ ‘ಸೋಮಾರಿ ರಾಷ್ಟ್ರ’ಗಳಲ್ಲಿ ಭಾರತವೂ ಸೇರಿದೆ, ‘ಅತ್ಯಂತ ಕ್ರಿಯಾಶೀಲ’ ರಾಷ್ಟ್ರ ಯಾವ್ದು ಗೊತ್ತಾ.?