ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ಮಂಗಳವಾರದಿಂದ ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್ (United Arab Emirates -UAE) ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ( President Sheikh Mohamed bin Zayed Al Nahyan ) ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಮತ್ತು ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ.
2015ರ ಬಳಿಕ ಯುಎಇಗೆ ಪ್ರಧಾನಿ ನೀಡುತ್ತಿರುವ ಏಳನೇ ಭೇಟಿ ಇದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ.
ಮೋದಿ ಮತ್ತು ಅಲ್ ನಹ್ಯಾನ್ ಅವರು ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸೋದಕ್ಕೆ, ವಿಸ್ತರಿಸುವ ಮತ್ತು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಲಿದ್ದಾರೆ. ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
ಯುಎಇಯ ಉಪಾಧ್ಯಕ್ಷ, ಪ್ರಧಾನಿ ಮತ್ತು ರಕ್ಷಣಾ ಸಚಿವ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನೂ ಪ್ರಧಾನಿ ಭೇಟಿ ಮಾಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಅವರ ಆಹ್ವಾನದ ಮೇರೆಗೆ, ಪ್ರಧಾನಿ ದುಬೈನಲ್ಲಿ ನಡೆಯಲಿರುವ ವಿಶ್ವ ಸರ್ಕಾರಿ ಶೃಂಗಸಭೆ 2024 ರಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶೃಂಗಸಭೆಯಲ್ಲಿ ವಿಶೇಷ ಮುಖ್ಯ ಭಾಷಣ ಮಾಡಲಿದ್ದಾರೆ” ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.
ಅಬುಧಾಬಿಯ ಮೊದಲ ಹಿಂದೂ ದೇವಾಲಯವಾದ ಬಿಎಪಿಎಸ್ ಮಂದಿರವನ್ನು ಮೋದಿ ಉದ್ಘಾಟಿಸಲಿದ್ದಾರೆ. ಜಾಯೆದ್ ಸ್ಪೋರ್ಟ್ಸ್ ಸಿಟಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಯುಎಇಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
BIG UPDATE: ಚಿಕ್ಕಬಳ್ಳಾಪುರದಲ್ಲಿ ‘ಶಾಲಾ ಕ್ರೀಡಾಕೂಟ’ದ ವೇಳೆ ‘ವಿದ್ಯುತ್ ಅವಘಡ’: ಓರ್ವ ಸಾವು, 18 ಜನರಿಗೆ ಗಾಯ
ರಾಜ್ಯ ‘ಗುತ್ತಿಗೆ, ಹೊರಗುತ್ತಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಸಮಾನ ಕೆಲಸಕ್ಕೆ, ‘ಸಮಾನ ವೇತನ’ ಜಾರಿ