ಗಾಂಧಿನಗರ (ಗುಜರಾತ್): ಗಾಂಧಿನಗರ-ಮುಂಬೈ ಸೆಂಟ್ರಲ್ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿ ಚಾಲನೆ ನೀಡಿದರು.
BIGG NEWS: ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ? ಎಂದು ಶೋಭಾ ಕರಂದ್ಲಾಜೆ ಗರಂ
ಬಳಿಕ ರೈಲ್ವೆ ಸಿಬ್ಬಂದಿ, ಮಹಿಳಾ ಉದ್ಯಮಿಗಳು ಮತ್ತು ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರದಿಂದ ಅಹಮದಾಬಾದ್ಗೆ ರೈಲಿನಲ್ಲಿ ಪ್ರಯಾಣಿಸಿದರು ಎಂದು ಪಿಎಂಒ ಹೇಳಿದೆ.
PM @narendramodi is on board the Vande Bharat Express from Gandhinagar to Ahmedabad. People from different walks of life, including those from the Railways family, women entrepreneurs and youngsters are his co-passengers on this journey. pic.twitter.com/DzwMq5NSXr
— PMO India (@PMOIndia) September 30, 2022
ಇದು ದೇಶದ ಮೂರನೇ ವಂದೇ ಭಾರತ್ ರೈಲು. ಈ ರೈಲು ಗಾಂಧಿನಗರ ಮತ್ತು ಮುಂಬೈ ನಡುವೆ ಸಂಚರಿಸಲಿದ್ದು, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳ ರಾಜಧಾನಿಗಳನ್ನು ಸಂಪರ್ಕಿಸುತ್ತದೆ. ಭಾನುವಾರ ಹೊರತುಪಡಿಸಿ ವಾರದಲ್ಲಿ 6 ದಿನ ರೈಲು ಸಂಚರಿಸಲಿದೆ.
BIGG NEWS: ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ? ಎಂದು ಶೋಭಾ ಕರಂದ್ಲಾಜೆ ಗರಂ
ಸಂಚಾರ ಸಮಯ: ವಂದೇ ಭಾರತ್ ರೈಲು 20901, ಮುಂಬೈ ಸೆಂಟ್ರಲ್ನಿಂದ ಬೆಳಗ್ಗೆ 6.10 ಕ್ಕೆ ಹೊರಟು ಮಧ್ಯಾಹ್ನ 12.30 ಕ್ಕೆ ಗಾಂಧಿನಗರ ತಲುಪಲಿದೆ. ಮುಂಬೈಗೆ ಹಿಂತಿರುಗುವ ರೈಲು- 20902 ಗಾಂಧಿನಗರ ರಾಜಧಾನಿ ನಿಲ್ದಾಣದಿಂದ ಮಧ್ಯಾಹ್ನ 2.05 ಕ್ಕೆ ಹೊರಟು ರಾತ್ರಿ 8.35 ಕ್ಕೆ ಮುಂಬೈ ಸೆಂಟ್ರಲ್ ತಲುಪಲಿದೆ. 16 ಕೋಚ್ಗಳನ್ನು ಹೊಂದಿರುವ ಈ ರೈಲು 1,128 ಪ್ರಯಾಣಿಕರ ಆಸನ ಸಾಮರ್ಥ್ಯವನ್ನು ಹೊಂದಿದೆ ಮತ್ತು ಗಾಂಧಿನಗರ ರಾಜಧಾನಿ ನಿಲ್ದಾಣವನ್ನು ತಲುಪುವ ಮೊದಲು ಸೂರತ್, ವಡೋದರಾ ಮತ್ತು ಅಹಮದಾಬಾದ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.