ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಹಾಗೂ ಉತ್ತರ ಭಾರತೀಯರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾವು ಕರ್ನಾಟಕವನ್ನು ಭಾರತ ಪುತ್ರಿ ಎಂದು ಪರಿಗಣಿಸುತ್ತೇವೆ. ಭಾರತ ಎಂದಿಗೂ ಯಾರನ್ನು ತಾರತಮ್ಯ ಮಾಡಿಲ್ಲ. ಆದರೆ ಮೋದಿ ಅಂತಹವರು ವಿಷ ಕಾರುತ್ತಾರೆ. ನಾವು ಪ್ರತಿ ರಾಜ್ಯದ ಜನರೊಂದಿಗೆ ಸಹಜೀವನದ ಸಂಬಂಧವನ್ನು ಹೊಂದಿದ್ದೇವೆ ಮತ್ತು ಅದರ ಬಗ್ಗೆ ಹೆಮ್ಮೆ ಪಡುತ್ತೇವೆ ಎಂದಿದ್ದಾರೆ.
ಪ್ರಧಾನಿ ಮೋದಿ ಅವರು ದಕ್ಷಿಣ ರಾಜ್ಯಗಳ ಚುನಾವಣೆ ಮುಗಿದ ಬಳಿಕ ದಕ್ಷಿಣ ರಾಜ್ಯಗಳ ಜನರನ್ನು ಗುರಿಯಾಗಿಸಿಕೊಂಡು ದಕ್ಷಿಣ ಹಾಗೂ ಉತ್ತರ ಭಾರತೀಯರನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.