ನವದೆಹಲಿ : ‘ಹರ್ ಘರ್ ತಿರಂಗಾ’ ಆಂದೋಲನವನ್ನು ಬಲಪಡಿಸುವಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಜನರನ್ನು ಒತ್ತಾಯಿಸಿದ್ದಾರೆ. ಆಗಸ್ಟ್ 13 ಮತ್ತು 15 ರ ನಡುವೆ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಅಥವಾ ಪ್ರದರ್ಶಿಸುವಂತೆ ಜನರಿಗೆ ಕರೆ ನೀಡಿದ್ದಾರೆ.
ಈ ಕುರಿತಂತೆ ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದು, ಈ ವರ್ಷ ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆಯಲ್ಲಿ ನಾವು ಹರ್ ಘರ್ ತಿರಂಗಾ ಆಂದೋಲನವನ್ನು ಬಲಪಡಿಸೋಣ. ತ್ರಿವರ್ಣ ಧ್ವಜವನ್ನು ಹಾರಿಸಿ ಅಥವಾ ಆಗಸ್ಟ್ 13 ಮತ್ತು 15 ರ ನಡುವೆ ಅದನ್ನು ನಿಮ್ಮ ಮನೆಗಳಲ್ಲಿ ಪ್ರದರ್ಶಿಸಿ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
This year, when we are marking Azadi Ka Amrit Mahotsav, let us strengthen the Har Ghar Tiranga Movement. Hoist the Tricolour or display it in your homes between 13th and 15th August. This movement will deepen our connect with the national flag. https://t.co/w36PqW4YV3
— Narendra Modi (@narendramodi) July 22, 2022
ಈ ಆಂದೋಲನವು ರಾಷ್ಟ್ರಧ್ವಜದೊಂದಿಗೆ “ನಮ್ಮ ಸಂಪರ್ಕವನ್ನು ಗಾಢಗೊಳಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಈ ಹಿಂದೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಾರತ ಮಾತೆಯ ನಿಜವಾದ ಮಕ್ಕಳು ಎಂದು ಸಾಬೀತುಪಡಿಸಲು ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ರಾಜ್ಯದ ನಿವಾಸಿಗಳನ್ನು ಒತ್ತಾಯಿಸಿದರು.
ಶರ್ಮಾ ಅವರ ಹೇಳಿಕೆಗೆ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. ಇದು ಜನರು ತಮ್ಮ ದೇಶಭಕ್ತಿಯನ್ನು ಸಾಬೀತುಪಡಿಸಲು ಕೇಳುವ ಅಗತ್ಯವಿಲ್ಲ ಎಂದು ಟೀಕೆ ಮಾಡಿದ್ದವು.
ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ಕೈಗೊಳ್ಳಲಿರುವ ‘ಹರ್ ಘರ್ ತಿರಂಗಾ’ ಅಭಿಯಾನದ ಭಾಗವಾಗಿ ಮುಂದಿನ ತಿಂಗಳು ಮೂರು ದಿನಗಳ ಕಾಲ ದೇಶಾದ್ಯಂತ 20 ಕೋಟಿಗೂ ಹೆಚ್ಚು ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ. ಭಾರತ ಮಾತೆಯ ಸೇವೆಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ಅಭಿಯಾನದಲ್ಲಿ 100 ಕೋಟಿಗೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಅಧಿಕೃತ ಹೇಳಿಕೆಯ ಪ್ರಕಾರ, ಜನರಲ್ಲಿ ಹೊಸ ದೇಶಭಕ್ತಿಯ ಭಾವವನ್ನು ಬೆಳೆಸಲು ಇದು ಹೆಚ್ಚು ಕೊಡುಗೆ ನೀಡುತ್ತದೆ ಎನ್ನಲಾಗುತ್ತಿದೆ.