ಬೆಂಗಳೂರು : ಲೋಕಸಭೆ ಚುಣಾವಣೆಗೆ ಇಂದು ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ದಾಖಲೆಯ ಸಂಖ್ಯೆಯಲ್ಲಿ ಮತದಾರರು ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ ಎಂದು ಹೇಳಿದ್ದಾರೆ.
ಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ.
— Narendra Modi (@narendramodi) May 7, 2024