ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನವೆಂಬರ್ 10 ರ ಗುರುವಾರ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಭೆ ನಡೆಸಿದರು. ಸಭೆಯಲ್ಲಿ ಮಾಜಿ ಸಚಿವ ಡಿ.ವಿ ಸದಾನಂದಗೌಡ, ಸಚಿವ ಅಶ್ವಥ್ ನಾರಾಯಣ್ ಮತ್ತಿತರಿದ್ದರು.
ಚಿತ್ರದುರ್ಗ: ನಾಳೆ ಹಿರಿಯೂರು ತಾಲೂಕಿನಲ್ಲಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut