ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇದೀಗ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದಾರೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಪದಗ್ರಹಣ ಮಾಡೋದಕ್ಕೆ ಸರ್ಕಾರ ರಚನೆಯ ಬಗ್ಗೆ ಹಕ್ಕು ಮಂಡನೆ ಮಾಡಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯದೇ ಹೋದರೂ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಬೆಂಬಲದೊಂದಿಗೆ 3ನೇ ಅವಧಿಗೆ ಮೋದಿ ಪ್ರಧಾನಿಯಾಗುವತ್ತ ಹೆಜ್ಜೆ ಹಾಕಿದ್ದಾರೆ.
ಜೂನ್.8ರಂದು 3ನೇ ಬಾರಿಗೆ ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಈ ಬೆನ್ನಲ್ಲೇ ನವದೆಹಲಿಯಲ್ಲಿನ ರಾಷ್ಟ್ರಪತಿ ಭವನಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಅಲ್ಲಿ ರಾಷ್ಟ್ರಪತಿಯವನ್ನು ಭೇಟಿಯಾಗಲಿರುವಂತ ಅವರು, ಸರ್ಕಾರ ರಚನೆ ಬಗ್ಗೆ ಹ್ಕಕು ಮಂಡನೆ ಮಾಡಲಿದ್ದಾರೆ.
BIG NEWS: ‘NDA’ಗೆ ಬೆಂಬಲಿಸಲು ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಇಟ್ಟ ಬೇಡಿಕೆಗಳೇನು ಗೊತ್ತಾ?