ಧಾರವಾಡ: ಮುಂದಿನ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 3-4 ಬಾರಿ ಬರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆಗೆ ಬರಲಿದ್ದಾರೆ. ಜನವರಿ 1ನೇ ತಾರೀಖಿಗೆ ಉದ್ಘಾಟನೆ ಮಾಡಬೇಕು ಎಂಬ ಯೋಜನೆಯಿದೆ. ಕಟ್ಟಡ ತಯಾರಾದರೆ ಅದೇ ದಿನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.
ಲೋಕೋಪಯೋಗಿ ಹಾಗೂ ಗುತ್ತಿಗೆದಾರರಿಗೆ ಜನವರಿ 1ನೇ ತಾರೀಖಿಗೆ ಕಟ್ಟಡ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿದೆ.
ಕೋವಿಡ್ ಹಿನ್ನೆಲೆ ಕಟ್ಟಡ ಕಾಮಗಾರಿ ತಡವಾಗಿದೆ. ಡಿಸೆಂಬರ್ನಲ್ಲೇ ಉದ್ಘಾಟನೆ ಮಾಡಬೇಕು ಎಂದು ನಾನು ಪ್ರಧಾನಿ ಜೊತೆ ಮಾತನಾಡಿದ್ದೆ ಎಂದು ಹೇಳಿದರು.ಜನವರಿ ತಿಂಗಳಿನಲ್ಲಿ ಪ್ರಧಾನಿ ಮೋದಿ 3-4 ಬಾರಿ ರಾಜ್ಯಕ್ಕೆ ಬರಲಿದ್ದಾರೆ. ಅದೇ ವೇಳೆ ಈ ಕಾರ್ಯಕ್ರಮ ಇಡಲಾಗಿದೆ. ಮುಂದಿನ ವಾರ ನಾನು ಮತ್ತೆ ಐಐಟಿಗೆ ಭೇಟಿ ನೀಡಿ ತೀರ್ಮಾನ ಮಾಡುತ್ತೇನೆ ಎಂದರು.