ಮೈಸೂರು: ಜಿಲ್ಲೆಯ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತವಾಗಿತ್ತು. ಹೀಗಾಗಿ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೋದಿ ಸಹೋದರ ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ, ಮೊಮ್ಮಗ ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ.
BREAKING NEWS: ಮಂಡ್ಯಕ್ಕೆ ಡಿ.30ರಂದು ಅಮಿತ್ ಶಾ ಭೇಟಿ ಹಿನ್ನೆಲೆ; ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ
ಗಾಯಾಳುಗಳ ಆರೋಗ್ಯದ ಕುರಿತು ಮುಖ್ಯಮಂತ್ರಿ ಹಾಗೂ ಪ್ರಧಾನಿ ಕಾರ್ಯಾಲಯಕ್ಕೆ ಕ್ಷಣಕ್ಷಣದ ಅಪ್ಡೇಟ್ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಳುಗಳು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಎರಡು ದಿನ ಮೈಸೂರಿನಲ್ಲೇ ವಾಸ್ತವ್ಯ ಹೂಡುವ ಸಾಧ್ಯತೆ ಇದೆ. ಕಾರಿನಲ್ಲಿದ್ದ ಮಗುವಿನ ಕಾಲಿಗೆ ಏಟಾಗಿರುವ ಕಾರಣ ಇಂದು ಹಾಗೂ ನಾಳೆ ಚಿಕಿತ್ಸೆ ಮುಂದುವರಿಯಲಿದೆ. ಸದ್ಯ ಗಾಯಾಳುಗಳು ತುರ್ತು ನಿಗಾ ಘಟಕದಿಂದ ವಾರ್ಡ್ಗೆ ಶಿಫ್ಟ್ ಆಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.