ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್.15ರಂದು ಪ್ರಧಾನಿ ಮೋದಿಯವರು ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿಲಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದಂತ ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು, ಮಾರ್ಚ್.15ರಂದು ಚಿಕ್ಕಬಳ್ಳಾಪುರದಲ್ಲಿ ಲೋಕಸಭಾ ಚುನಾವಮಾ ಪ್ರಚಾರಕ್ಕೆ ಪ್ರಧಾನಿ ಮೋದಿಯವರು ಚಾಲನೆ ನೀಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಮಾರ್ಚ್.15ರಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಿಕ್ಕಬಳ್ಳಾಪುರದಲ್ಲಿ ಚಾಲನೆ ನೀಡಲಿದ್ದಾರೆ. ಮೋದಿಯವರು ಚಿಕ್ಕಬಳ್ಳಾಪುರಕ್ಕೆ ಬಂದು ಚಾಲನೆ ನೀಡುವುದಾಗಿ ಮಾಹಿತಿ ನೀಡಿದರು.