ಬೆಂಗಳೂರು: ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ನಡೆಸಿದಂತ ಪ್ರಧಾನಿ ನರೇಂದ್ರ ಮೋದಿಯವರು, ಅಲ್ಲಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಕರ್ನಾಟಕದಲ್ಲೂ ಪ್ರಚಾರ ನಡೆಸೋದಕ್ಕೆ ಆಗಮಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರ ತಾಲೂಕಿನ ಆಗಲಗುರ್ಕಿಯಲ್ಲಿ ನಡೆಯುವಂತ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಚಿಕ್ಕಬಳ್ಳಾಪುರಕ್ಕೆ ತಲುಪಲಿರುವಂತ ಪ್ರಧಾನಿ ನರೇಂದ್ರ ಮೋದಿಯವರು, ಅಲ್ಲಿ ಜನರನ್ನು ಉದ್ದೇಶಿಸಿ, ಲೋಕಸಭಾ ಚುನಾವಣಾ ಸಂಬಂಧ ಭಾಷಣ ಮಾಡಲಿದ್ದಾರೆ.
BREAKING: ‘ಚುನಾವಣಾ ನೀತಿ ಸಂಹಿತೆ’ ಉಲ್ಲಂಘನೆ: ‘ಡಿಸಿಎಂ ಡಿ.ಕೆ ಶಿವಕುಮಾರ್’ ವಿರುದ್ಧ ‘FIR’ ದಾಖಲು