ನವದೆಹಲಿ: ಕಾಂಗ್ರೆಸ್ ಪಾರ್ಟಿಯ ಹೊಸ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ ವಿಶ್ ಮಾಡಿದ್ದಾರೆ. ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೊಸ ಜವಾಬ್ದಾರಿಗಾಗಿ ಅವರಿಗೆ ನನ್ನ ಶುಭ ಹಾರೈಕೆಗಳು. ಅವರ ಮುಂದಿನ ಫಲಪ್ರದ ಅಧಿಕಾರಾವಧಿಯನ್ನು ಹೊಂದಲಿ ಅಂಥ ಪ್ರಧಾನಿ ಮೋದಿ ಹೇಳಿದ್ದಾರೆ.
ನವದೆಹಲಿ : ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. .
ಕಾಂಗ್ರೆಸ್ ಅಧ್ಯಕ್ಷರು ಭಾರತದ ಪ್ರಜಾಸತ್ತಾತ್ಮಕ ದೃಷ್ಟಿಕೋನವನ್ನು ಪ್ರತಿನಿಧಿಸುತ್ತಾರೆ. ಅವರ ಅಪಾರ ಅನುಭವ ಮತ್ತು ಸೈದ್ಧಾಂತಿಕ ಬದ್ಧತೆಯಿಂದ ಅವರು ಈ ಐತಿಹಾಸಿಕ ಜವಾಬ್ದಾರಿಯನ್ನು ತೆಗೆದುಕೊಂಡಿದ್ದು, ಪಕ್ಷಕ್ಕೆ ಉತ್ತಮವಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕ ಖರ್ಗೆ ಕಾಂಗ್ರೆಸ್ ಗೆ ಕಿಂಗ್ ಆಗಿದ್ದಾರೆ. ಹೌದು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆ (Congress president’s election) ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಯ್ಕೆಯಾಗಿದ್ದಾರೆ.
ಇಂದು ಮತಎಣಿಕೆ ನಡೆದಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿಯಾದ ಶಶಿ ತರೂರ್ ಅವರಿಗೆ ಕೇವಲ 1072 ಮತಗಳನ್ನು ಪಡೆದಿದ್ದಾರೆ. ಈಮೂಲಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್(Congress)ಗೆ ಅಧ್ಯಕ್ಷೀಯ ಚುನಾವಣೆಯು ಅಕ್ಟೋಬರ್ 17 ಅಂದ್ರೆ, ಸೋಮವಾರ ನಡೆದಿತ್ತು. ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಆಯ್ಕೆಯಾಗಿದ್ದು, ಈ ಹಿನ್ನೆಲೆ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.