ನವದೆಹಲಿ: ಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ 296 ಕಿ.ಮೀ. ಉದ್ದದ ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇ ರಸ್ತೆ ಕೇವಲ ಐದೇ ಐದು ದಿನಕ್ಕೆ ಕಿತ್ತು ಹೋಗಿದ್ದು, ಖುದ್ದು ಬಿಜೆಪಿ ಸಂಸದರೇ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಜಲೌನ್ ಜಿಲ್ಲೆಯ ಬಳಿ 296 ಕಿ.ಮೀ ಉದ್ದದ ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇಯ ಕೆಲವು ಭಾಗಗಳು ಕುಸಿದಿವೆ ಮತ್ತು ಗುರುವಾರ ಭಾರಿ ಮಳೆಯಿಂದಾಗಿ ಅದರ ಮೇಲೆ ಆಳವಾದ ಗುಂಡಿಗಳು ಕಂಡುಬಂದಿವೆ.
ಬಿಜೆಪಿ ಸಂಸದ ವರುಣ್ ಗಾಂಧಿ ಅವರು ತಮ್ಮದೇ ಪಕ್ಷದ ಬಗ್ಗೆ ಬಹಿರಂಗವಾಗಿ ಟೀಕಿಸುತ್ತಿದ್ದು, ಅವರ ಹೇಳಿಕೆಗಳು ಟ್ವಿಟರ್ನಲ್ಲಿ ವೈರಲ್ ಆಗುತ್ತಿದ್ದಾವೆ. “₹ 15,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಎಕ್ಸ್ಪ್ರೆಸ್ವೇಗೆ ಐದು ದಿನಗಳ ಮಳೆಯನ್ನು ಸಹಿಸಲು ಸಾಧ್ಯವಾಗದಿದ್ದರೆ, ಅದರ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳು ಏಳುತ್ತವೆ” ಎಂದು ಅವರು ಹಿಂದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ವರುಣ್ ಗಾಂಧಿ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದರು. ಯೋಜನೆಯ ಮುಖ್ಯಸ್ಥರು, ಸಂಬಂಧಪಟ್ಟ ಎಂಜಿನಿಯರ್ ಮತ್ತು ಜವಾಬ್ದಾರಿಯುತ ಕಂಪನಿಗಳನ್ನು ಕರೆಸಿಕೊಂಡು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಎಕ್ಸ್ಪ್ರೆಸ್ವೇ ಬಗ್ಗೆ ಬಿಜೆಪಿಯನ್ನು ಟೀಕಿಸಿದ್ದು, ಇದು “ಬಿಜೆಪಿಯ ಅರೆಮನಸ್ಸಿನ ಅಭಿವೃದ್ಧಿಯ ಗುಣಮಟ್ಟದ ಮಾದರಿ” ಎಂದು ಕರೆದಿದ್ದಾರೆ.
15 हजार करोड़ की लागत से बना एक्सप्रेसवे अगर बरसात के 5 दिन भी ना झेल सके तो उसकी गुणवत्ता पर गंभीर प्रश्न खड़े होते हैं।
इस प्रोजेक्ट के मुखिया, सम्बंधित इंजीनियर और जिम्मेदार कंपनियों को तत्काल तलब कर उनपर कड़ी कार्यवाही सुनिश्चित करनी होगी।#BundelkhandExpressway pic.twitter.com/krD6G07XPo
— Varun Gandhi (@varungandhi80) July 21, 2022