ಯಾದಗಿರಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿರುವ ವಿಚಾರವಾಗಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಂಡರೆ ಹೆದರಿಕೆ ಇದೆ ಹಾಗಾಗಿ ಅವರಿಗೆ ಭೇಟಿ ನೀಡಲು ಸಮಯಾವಕಾಶ ನೀಡಿದ್ದಾರೆ ಎಂದರು.
ಇಂದು ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ಫೇಸ್ ವ್ಯಾಲ್ಯೂ ಹೋಗಿದೆ. ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ಮೋದಿ ಬಾಗಿಲವರೆಗೆ ಹೋಗಿ ಭೇಟಿ ಮಾಡ್ತಿದ್ದಾರೆ. ಡಿಕೆ ಶಿವಕುಮಾರ ಬಗ್ಗೆ ಪ್ರಧಾನಿ ಮೋದಿಗೆ ಅಂಜಿಕೆ ಇದೆ ಹೀಗಾಗಿ ಡಿಕೆಶಿ ಭೇಟಿಯಾಗಲು ಮೋದಿ ಸಮಯ ಕೊಟ್ಟು ಭೇಟಿಯಾಗಿದ್ದಾರೆ. ಅಂಜಿಕೆ ಇದ್ರೆ ಭೇಟಿಯಾಗಲು ಕರೆಯುತ್ತಾರೆ ಎಂದರು.
ಸಿದ್ದರಾಮಯ್ಯ ಮುಂದಿನ ಐದು ವರ್ಷ ಅಲ್ಲ, ಹತ್ತು ವರ್ಷ ಸಿಎಂ ಆಗಿ ಅಧಿಕಾರದಲ್ಲಿರ್ತಾರೆ. ರಾಜ್ಯದಲ್ಲಿ ಸಿದ್ದರಾಮಯ್ಯನವರಿಗೆ ಹೆಚ್ಚಿನ ಜನ ಬೆಂಬಲವಿದೆ. ಜನ ಬೆಂಬಲವಿರೋದಕ್ಕೆ ಬಿಜೆಪಿ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡುತ್ತಿದೆ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯುವ ಯತ್ನ ಮಾಡಿದ್ರೂ ಯಾರೂ ಬಿಜೆಪಿಗೆ ಹೋಗುತ್ತಿಲ್ಲ. ಈ ಹಿಂದೆ ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದ ಮೂಲಕ 17 ಶಾಸಕರನ್ನು ಖರೀದಿ ಮಾಡಿ ಬಿಜೆಪಿ ಸರಕಾರ ರಚನೆ ಮಾಡಿತ್ತು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.