ಬಾಲಿ(ಇಂಡೋನೇಷಿಯಾ): ಬಾಲಿಯಲ್ಲಿ ನಡೆಯುತ್ತಿರುವ G20 ಶೃಂಗಸಭೆಯಲ್ಲಿ ಕರ್ನಾಟಕದ ಅಳಿಯ, ಯುಕೆ ಪ್ರಧಾನಿ ರಿಷಿ ಸುನಕ್(Rishi Sunak)ಅವರನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದೇ ವೇಳೆ ಅನೌಪಚಾರಿಕ ಸಂವಾದ ನಡೆಸಿದರು ಮತ್ತು ಹಲವಾರು ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಕಳೆದ ತಿಂಗಳು ಯುಕೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಿಷಿ ಸುನಕ್ ಅವರನ್ನು ಮೋದಿ ಮೊದಲ ಬಾರಿಗೆ ಭೇಟಿಯಾಗಿದ್ದಾರೆ.

ಭಾರತವು ಡಿಸೆಂಬರ್ 1, 2022 ರಿಂದ ಒಂದು ವರ್ಷದವರೆಗೆ G20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ. G20 ಶೃಂಗವು ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ದಕ್ಷಿಣ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, UK, USA ಮತ್ತು ಯುರೋಪಿಯನ್ ಯೂನಿಯನ್ (EU) ಹೀಗೆ 19 ದೇಶಗಳನ್ನು ಒಳಗೊಂಡಿದೆ.

BIGG NEWS: ಕಡೂರು ಕ್ಷೇತ್ರದ ಅಭಿವೃದ್ಧಿಗೆ 2,800 ಕೋಟಿ ಅನುದಾನ; ಸಿಎಂ ಬೊಮ್ಮಾಯಿ

BIGG NEWS : ಆಂಧ್ರದಲ್ಲಿ ಕಾಂತಾರ’ ಗೆಟಪ್‌ನಲ್ಲಿ ಕಾಣಿಸಿಕೊಂಡ ತಹಶೀಲ್ದಾರ್ : ಡೈಲಾಗ್ ಕೇಳಿ ʼಅಚ್ಚರಿಗೊಂಡ ಡಿಸಿʼ| Kantara Movie

BIG NEWS: ʻASEANʼ ಶೃಂಗಸಭೆ ಯೋಜಿಸಿದ್ದ ಕಾಂಬೋಡಿಯಾ ಪ್ರಧಾನಿ ʻಹುನ್ ಸೇನ್ʼಗೆ ಕೋವಿಡ್‌ ಪಾಸಿಟಿವ್‌ | Covid‌ positive for Hun Sen

BIGG NEWS: ಕಡೂರು ಕ್ಷೇತ್ರದ ಅಭಿವೃದ್ಧಿಗೆ 2,800 ಕೋಟಿ ಅನುದಾನ; ಸಿಎಂ ಬೊಮ್ಮಾಯಿ

Share.
Exit mobile version