ಅಯೋಧ್ಯೆ(ಉತ್ತರ ಪ್ರದೇಶ): ದೀಪಾವಳಿಯ ಪ್ರಯುಕ್ತ ದೀಪೋತ್ಸವ ಕಾರ್ಯಕ್ರಮವನ್ನು ಇಂದು ಸಂಜೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆಚರಿಸಲಾಗುತ್ತದೆ. ಈ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ.
ದೀಪಾವಳಿಯ ಮುನ್ನಾದಿನದಂದು ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಇಂದು ಸಂಜೆ ಅಯೋಧ್ಯೆಗೆ ತಲುಪಲಿದ್ದಾರೆ. ಈ ವೇಳೆ ಭಗವಾನ್ ಶ್ರೀ ರಾಮಲಾಲಾ ವಿರಾಜಮಾನರ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದು, ನಂತರ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಸ್ಥಳವನ್ನು ಪರಿಶೀಲಿಸಲಿದ್ದಾರೆ. ನಂತ್ರ ಸಾಂಕೇತಿಕ ಭಗವಾನ್ ಶ್ರೀರಾಮನ ರಾಜ್ಯಾಭಿಷೇಕವನ್ನು ಮೋದಿ ನೆರವೇರಿಸಲಿದ್ದಾರೆ. ಈ ವರ್ಷ, ದೀಪೋತ್ಸವದ ಆರನೇ ಆವೃತ್ತಿಯನ್ನು ನಡೆಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿಯವರು ಸಮಾರಂಭದಲ್ಲಿ ಖುದ್ದು ಭಾಗವಹಿಸುತ್ತಿದ್ದಾರೆ.
ದೀಪೋತ್ಸವದಲ್ಲಿ 15 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಬೆಳಗಿಸಲಾಗುವುದು ಎಂದು ಆಯುಕ್ತ ನವದೀಪ್ ರಿನ್ವಾ ತಿಳಿಸಿದ್ದಾರೆ. ಇವುಗಳಲ್ಲದೆ, ಅಯೋಧ್ಯೆಯ ಪ್ರಮುಖ ದೇವಾಲಯಗಳಲ್ಲಿ 3 ರಿಂದ 4 ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸಲಾಗುತ್ತದೆ. ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಧರಂಪಾಲ್ ಸಿಂಗ್ ಅವರು ರಾಮ್ಲಾಲಾ ಮತ್ತು ಇತರ ಪ್ರದೇಶಗಳಲ್ಲಿ ಹಸುವಿನ ಸಗಣಿಯಿಂದ ಮಾಡಿದ ಒಂದು ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಬೆಳಗಿಸಲಾಗುವುದು ಎಂದು ಹೇಳಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಅಯೋಧ್ಯೆ ನಗರ ಮತ್ತು ಸುತ್ತಮುತ್ತ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.
BIGG NEWS: ಆನಂದ ಮಾಮನಿ ರಾಜಕೀಯ ಕ್ಷೇತ್ರದಲ್ಲಿ ನಡೆದು ಬಂದ ಹಾದಿ ಹೇಗಿತ್ತು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
BIG NEWS: ಬೀದಿ ನಾಯಿಗಳಿಗೆ ನೀವು ಆಹಾರ ನೀಡಲು ಬಯಸಿದ್ರೆ, ಅವುಗಳನ್ನು ದತ್ತು ತೆಗೆದುಕೊಳ್ಳಿ: ಬಾಂಬೆ ಹೈಕೋರ್ಟ್