ಮೈಸೂರು: ಬೆಂಗಳೂರಿನ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿದ ಬಳಿಕ, ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ), ಇಂದು ಮೈಸೂರಿಗೆ ಭೇಟಿ ನೀಡಿದರು. ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ, ಅಲ್ಲಿಂದ ನಾಡಿನ ಅಧಿದೇವತೆ ಚಾಮುಂಡೇಶ್ವರಿಯವರ ದರ್ಶನವನ್ನು ಪಡೆದರು.
BIG NEWS: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಸೈನಿಕ ಕೋಟಾದಲ್ಲಿ ಮೊದಲ Rank ಪಡೆದಿದ್ದ ಅಭ್ಯರ್ಥಿ ಅರೆಸ್ಟ್
ಮೈಸೂರಿನಲ್ಲಿ ನಾಳೆ ನಡೆಯಲಿರುವಂತ ಅಂತರಾಷ್ಟ್ರೀಯ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸೋ ನಿಟ್ಟಿನಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆಯಿಂದ ಬೆಂಗಳೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಕೊಮ್ಮಘಟ್ಟದಲ್ಲಿನ ಸಾರ್ವಜನಿಕ ಕಾರ್ಯಕ್ರಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದರು. ಈ ಬಳಿಕ ಮೈಸೂರಿಗೆ ಹೆಲಿಕ್ಯಾಪ್ಟರ್ ಮೂಲಕ ತೆರಳಿದರು.
ದೆಹಲಿಗೆ ಪ್ರಯಾಣ ಬೆಳೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್: ನಾಳೆ ಜಂತರ್ ಮಂತರ್ ನಲ್ಲಿನ ಪ್ರತಿಭಟನೆಯಲ್ಲಿ ಭಾಗಿ
ಮೈಸೂರಿಗೆ ಬಂದಂತ ಅವರು, ಅಲ್ಲಿಂದ ಸುತ್ತೂರು ಮಠದಲ್ಲಿ ಆಯೋಜಿಸಿದ್ದಂತ ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಿದರು. ಈ ಕಾರ್ಯಕ್ರಮ ಮುಗಿಸಿದ ಪ್ರಧಾನಿ ನರೇಂದ್ರ ಮೋದಿಯವರು, ನಾಡಿನ ಅಧಿದೇವತೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ಅಲ್ಲಿ ನಾಡಿನ ಶಕ್ತಿ ದೇವತೆಯ ದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಪಡೆದರು.