ಬೆಂಗಳೂರು: ರಾಜ್ಯದ ಪ್ರತಿ ತಾಲೂಕಿನಲ್ಲಿ ಎರಡರಂತೆ ಪಿಎಂ ಶ್ರೀ ಶಾಲೆಗಳನ್ನು ( PM SHRI School ) ಆರಂಭಿಸಲು ಉದ್ದೇಶಿಲಾಗಿದೆ ಎಂಬುದಾಗಿ ಸಮಗ್ರ ಶಿಕ್ಷಣ ಕರ್ನಾಟದ ನಿರ್ದೇಶಕರು ತಿಳಿಸಿದ್ದಾರೆ.

ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಪುಟ್ಟಣ್ಣ ಕಣಗಾಲ್ – ಡಾ.ಮಹೇಶ ಜೋಶಿ ಬಣ್ಣನೆ

ಈ ಕುರಿತಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು, ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ. ಅದರಲ್ಲಿ ಕೇಂದ್ರ ಸಚಿವ ಸಂಪುಟವು ಕೇಂದ್ರ ಪ್ರಾಯೋಜಿತ ಹೊಸ ಯೋಜನೆ PM SHRi – PM School For Rising India ಗೆ ಸಂಪುಟದ ಅನುಮೋದನೆ ದೊರೆತಿದೆ. ದೇಶಾದ್ಯಂತ ಎನ್ ಪಿಇ 2020ರ ಎಲ್ಲಾ ಘಟಕಗಳನ್ನು ಅನುಷ್ಛಾನಗೊಳಿಸಲು 14,500ಕ್ಕೂ ಹೆಚ್ಚು ಶಾಲೆಗಳನ್ನು PM SHRI ಶಾಲೆಗಳಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದಿದ್ದಾರೆ.

BREAKING NEWS: ಚಿತ್ರದುರ್ಗದ ಭರಮಸಾಗರದಲ್ಲಿ ಮದುವೆ ಊಟ ಸೇವಿಸಿದ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಯು-ಡೈಸ್ ಕೋಡ್ ಹೊಂದಿರುವ ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ಬರುವ ಸರ್ಕಾರಿ ಪ್ರಾಥಮಿಕ ಶಾಲೆಗಳು (1-5 ಹಾಗೂ 1-8ನೇ ತರಗತಿ ) ಹಾಗೂ ಮಾಧ್ಯಮಿಕ, ಹಿರಿಯ ಮಾಧ್ಯಮಿಕ ಶಾಲೆಗಳನ್ನು (1-10, 1-12, 6-10, 6-12ನೇ ತರಗತಿ) ಈ ಯೋಜನೆಯಡಿ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ.

ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಅಳವಡಿಸಬೇಕು – ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯ | Bhagavad Gita

ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಪ್ರತಿ ತಾಲೂಕಿಗೆ ಎರಡರಂತೆ Challenge Mode ನಲ್ಲಿ PM SHRI ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಆನಗೊಳಿಸಲು, ಈಗಾಗಲೇ ಆಯ್ಕೆಗೊಂಡ ಶಾಲೆಗಳಿಗೆ ಆಯಾಯಾ ಗ್ರಾಮ ಪಂಚಾಯ್ತಿಯಿಂದ ಒಪ್ಪಿಗೆ ಪತ್ರ ನೀಡಬೇಕಿದೆ. ಅದನ್ನು ಗ್ರಾಮಪಂಚಾಯ್ತಿಗಳಿಂದ ಕೊಡಿಸಲು ನಿರ್ದೇಶ ನೀಡಲು ಕೋರಿದ್ದಾರೆ.

Share.
Exit mobile version