ನವದೆಹಲಿ: ಪಿಎಂ-ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಒಂದು ಕೋಟಿ ಕುಟುಂಬಗಳು ನೋಂದಾಯಿಸಿಕೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂತಸ ವ್ಯಕ್ತಪಡಿಸಿದ್ದಾರೆ.
ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ 1 ಕೋಟಿಗೂ ಹೆಚ್ಚು ಜನರು ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ಈ ಮಾಹಿತಿಯನ್ನು ಪ್ರಧಾನಮಂತ್ರಿಯವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
Outstanding news!
In about a month since it was launched, over 1 crore households have already registered themselves for the PM-Surya Ghar: Muft Bijli Yojana.
Registrations have been pouring in from all parts of the nation. Assam, Bihar, Gujarat, Maharashtra, Odisha, Tamil…
— Narendra Modi (@narendramodi) March 16, 2024
ಈ ಯೋಜನೆಯಡಿ 1 ಕೋಟಿ ಮನೆಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಸಿಗಲಿದೆ. ಎಂದು ಪಿಎಂ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಪ್ರಾರಂಭವಾದ ಸುಮಾರು ಒಂದು ತಿಂಗಳಲ್ಲಿ, 1 ಕೋಟಿಗೂ ಹೆಚ್ಚು ಕುಟುಂಬಗಳು ಈಗಾಗಲೇ ಪಿಎಂ-ಸೂರ್ಯ ಘರ್: ಮುಫ್ಟ್ ಬಿಜ್ಲಿ ಯೋಜನೆಗೆ ತಮ್ಮನ್ನು ನೋಂದಾಯಿಸಿಕೊಂಡಿವೆ.
ದೇಶದ ಎಲ್ಲಾ ಭಾಗಗಳಿಂದ ನೋಂದಣಿಗಳು ಹರಿದು ಬರುತ್ತಿವೆ. ಅಸ್ಸಾಂ, ಬಿಹಾರ, ಗುಜರಾತ್, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಮತ್ತು ಉತ್ತರ ಪ್ರದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ನೋಂದಣಿಗಳು ನಡೆದಿವೆ. ಇನ್ನೂ ನೋಂದಾಯಿಸಿಕೊಳ್ಳದವರು ಸಹ ಆದಷ್ಟು ಬೇಗ ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.