ಬೆಂಗಳೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದು ಈ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು. ಇದೀಗ ಮೈಸೂರು ದಸರಾಗೆ ಪ್ರಧಾನಿ ಮೋದಿ ಬರುವ ಸಾಧ್ಯತೆಗಳಿವೆ ಎಂದು ಚರ್ಚೆಗಳು ಶುರುವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಸರ್ಕಾರ ಆಹ್ವಾನ ನೀಡಿದೆ. ಹೀಗಾಗಿ ದಸರಾಗೆ ಬರಲು ಮೋದಿ ಸಹ ತುಂಬಾ ಉತ್ಸಹಕರಾಗಿದ್ದಾರೆ. ದಸರಾ ಅಂಬಾರಿಗೆ ಮೋದಿಯಿಂದ ಪುಷ್ಪಾರ್ಚನೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರಧಾನಿ ಮೋದಿ ದಸರಾಗೆ ಬರುತ್ತರೋ ..ಇಲ್ವೋ ಎಂಬುದು ಎರಡು ದಿನಗಳಲ್ಲಿ ಗೊತ್ತಾಗುತ್ತದೆ. ಇದಕ್ಕಾಗಿ ಜನರು ಕೂಡ ಕಾದು ಕುಳಿತಿದ್ದಾರೆ.
ಇನ್ನೂ ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ. ಅಕ್ಟೋಬರ್ 5ರಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ