ಅಹಮದಾಬಾದ್‌: ಇಂದು ಗುಜರಾತ್ ವಿಧಾನಸಭೆಯ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಅಹಮದಾಬಾದ್‌ನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಇಂದು 14 ಜಿಲ್ಲೆಗಳಲ್ಲಿ 93 ಕ್ಷೇತ್ರಗಳಲ್ಲಿ ನಡೆಯುತ್ತಿದ್ದು, ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ 2.5 ಕೋಟಿಗೂ ಹೆಚ್ಚು ಮತದಾರರು ಮತ ಚಲಾಯಿಸಲಿದ್ದಾರೆ. 833 ಅಭ್ಯರ್ಥಿಗಳು ಕಣದಲ್ಲಿದ್ದು, ಗುಜರಾತ್ ಬಿಜೆಪಿ, ಆಪ್ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ.

ಎರಡನೇ ಹಂತದ ಮತದಾನದಲ್ಲಿ ಬಿಜೆಪಿ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಎಲ್ಲಾ 93 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ 90 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಅದರ ಮೈತ್ರಿ ಪಾಲುದಾರ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಎರಡು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಮೊದಲ ಹಂತದ ಚುನಾವಣೆಯು ಡಿಸೆಂಬರ್ 1 ರಂದು ನಡೆಯಿತು. ಇನ್ನೂ, ಡಿ.5ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರಿಕ್ ಬಗ್ಗೆ `NIA’ಗೆ ಮತ್ತೊಂದು ಸ್ಪೋಟಕ ಮಾಹಿತಿ

BIG NEWS: ಪ್ರಸಿದ್ಧ ‘ಸಿಟಿ ಆಫ್ ಜಾಯ್’ ಪುಸ್ತಕ ಬರೆದ ಫ್ರೆಂಚ್ ಲೇಖಕ ʻಡೊಮಿನಿಕ್ ಲ್ಯಾಪಿಯರ್ʼ ಇನ್ನಿಲ್ಲ | Dominique Lapierre no more

BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರಿಕ್ ಬಗ್ಗೆ `NIA’ಗೆ ಮತ್ತೊಂದು ಸ್ಪೋಟಕ ಮಾಹಿತಿ

Share.
Exit mobile version