Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕಣ್ಗಾವಲು: ಕಳೆದ 24 ಗಂಟೆಗಳಲ್ಲಿ 28 ಹಡಗುಗಳ ಸುಗಮ ಸಂಚಾರ

ಪೆಟ್ರೋಲ್, ಡೀಸೆಲ್ ಮತ್ತು ಎಟಿಎಫ್ ರಫ್ತು ಸುಂಕ ಕಡಿತ: ಇಂದಿನಿಂದ ಜಾರಿಗೆ ಬರುವ ಹೊಸ ದರಗಳ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪರಿಸರಸ್ನೇಹಿ ಅಟೋಮೊಬೈಲ್ ಕ್ಷೇತ್ರಕ್ಕೆ ಪಿಎಂ ಇ-ಡ್ರೈವ್, ಪಿಎಲ್ಐ ಕೊಡುಗೆ ನಿರ್ಣಾಯಕ: HDK
KARNATAKA

ಪರಿಸರಸ್ನೇಹಿ ಅಟೋಮೊಬೈಲ್ ಕ್ಷೇತ್ರಕ್ಕೆ ಪಿಎಂ ಇ-ಡ್ರೈವ್, ಪಿಎಲ್ಐ ಕೊಡುಗೆ ನಿರ್ಣಾಯಕ: HDK

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕಳೆದ ಹತ್ತು ವರ್ಷಗಳಲ್ಲಿ ಭಾರತದ ಅಟೋಮೊಬೈಲ್ ಕ್ಷೇತ್ರದಲ್ಲಿ ಅಭೂತಪೂರ್ವ ಕ್ರಾಂತಿ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾರಿಗೆ ಬಂದಿರುವ ಪಿಎಂ ಇ-ಡ್ರೈವ್ ಯೋಜನೆಯಿಂದ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆಯ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯ ಭಾರತ್ ಮಂಟಪದಲ್ಲಿ ಐದು ದಿನಗಳ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವರು ಭಾಷಣ ಮಾಡಿದರು.

ವಾಯುಮಾಲಿನ್ಯ ನಿವಾರಣೆ ನಿಟ್ಟಿನಲ್ಲಿ ಅನುಷ್ಠಾನಕ್ಕೆ ತರಲಾಗಿರುವ ಹಸಿರುಪೂರಕ ಉಪ ಕ್ರಮಗಳಿಂದ ದೇಶೀಯ ಎಕೋ ಅಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚು ಅನುಕೂಲ ಆಗಿದೆ. ಎಲೆಕ್ಟ್ರಿಕ್ ವಾಹನಗಳು (ಇವಿಗಳು), ಶುದ್ಧ ಇಂಧನ ಪರಿಹಾರಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಿರುವ ಪರಿಸರ ಸ್ನೇಹಿ ಸಾರಿಗೆಯಲ್ಲಿ ಭಾರತವು ನಾಗಾಲೋಟದಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಸ್ವಚ್ಛ ಭಾರತ್ ಅಭಿಯಾನವೂ ಸೇರಿದಂತೆ ಪ್ರಧಾನಮಂತ್ರಿಗಳ ಪರಿಸರ ಸ್ನೇಹಿ ನೀತಿಗಳು ಭಾರತದ ಹಸಿರು ಅಟೋಮೊಬೈಲ್ ಭವಿಷ್ಯಕ್ಕೆ ಖಾತರಿಯಾಗಿವೆ. ಪಿಎಂ ಇ-ಡ್ರೈವ್ ಯೋಜನೆಯಿಂದ ಈ ಕ್ಷೇತ್ರವು ಪರಿಣಾಮಕಾರಿಯಾಗಿ ವಾಯುಮಾಲಿನ್ಯ ಹೊರಸೂಸುವಿಕೆಯನ್ನು ಕಡಿಮೆ ಮಾಡುತ್ತಿದೆ ಎಂದು ಬೃಹತ್ ಕೈಗಾರಿಕೆ ಸಚಿವರು ಹೇಳಿದರು.

ಹಸಿರು ಅಟೋಮೊಬೈಲ್ ಕ್ಷೇತ್ರದ ಪ್ರಯೋಗಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಕೇಂದ್ರ ಸರಕಾರ ಪಿಎಂ ಇ-ಡ್ರೈವ್ ಯೋಜನೆ ಹಾಗೂ ಉತ್ಪಾದನಾ ಸಂಪರ್ಕ ಸೌಲಭ್ಯ (PLI) ದಿಂದ ಹೆಚ್ಚು ಅನುಕೂಲ ಆಗಿದೆ ಎಂದು ಅವರು ಒತ್ತಿ ಹೇಳಿದರು.

ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಖಾತೆ ಸಚಿವರಾದ ಜಿತನ್ ರಾಮ್ ಮಾಂಝ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಹಾಗೂ ಪೆಟ್ರೋಲಿಯ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸುಧಾರಿತ ಆಟೋಮೋಟಿವ್ ಟೆಕ್ನಾಲಜಿ ಉತ್ಪನ್ನಗಳನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರಕಾರ ಪಿಎಲ್‌ಐ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಪಿಎಂ ಇ-ಡ್ರೈವ್ ಯೋಜನೆಯಿಂದ ಎಲೆಕ್ಟ್ರಿಕ್ ಆಂಬ್ಯುಲೆನ್ಸ್‌ಗಳು, ಬಸ್‌ಗಳು, ಟ್ರಕ್‌ಗಳು ಮತ್ತು ಮೂಲಸೌಕರ್ಯಗಳನ್ನು ಉತ್ತೇಜಿಸುವ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಿಂದ ಇದೆಲ್ಲಾ ಸಾಧ್ಯವಾಗಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

“ಭಾರತದ ಆಟೋಮೊಬೈಲ್ ಉದ್ಯಮವು ಈಗಾಗಲೇ ಜಾಗತಿಕವಾಗಿ 3ನೇ ಅತಿ ದೊಡ್ಡ ಉದ್ಯಮವಾಗಿ ಬೆಳೆದಿದೆ. ಸುಧಾರಿತ ವಾಹನ ತಂತ್ರಜ್ಞಾನ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿದೆ. ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತ್ ಅಡಿಯಲ್ಲಿ ನಾವು ದೇಶೀಯ ಸ್ವಾವಲಂಬನೆಯತ್ತ ಮುನ್ನಡೆಯುತ್ತಿದ್ದೇವೆ. ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಪ್ರಮುಖ ರಫ್ತುದಾರರಾಗಿ ಹೊರಹೊಮ್ಮುತ್ತಿದ್ದೇವೆ ಎಂದು ಸಚಿವರು ಹೇಳಿದರು.

ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಯಲ್ಲಿ ಭಾರತ ವೇಗವಾಗಿ ದಾಪುಗಾಲು ಇಡುತ್ತಿದೆ ಎಂದ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಾವು ಮುಂದಿನ ಪೀಳಿಗೆಗಳು ಹೆಮ್ಮೆಪಡುವಂತಹ ಭಾರತವನ್ನು ನಿರ್ಮಿಸುತ್ತಿದ್ದೇವೆ. ನಾವು ಪರಿಸರಪೂರಕ ಉಪಕ್ರಮಗಳನ್ನು ಬೆಂಬಲಿಸೋಣ ಮತ್ತು ಸ್ವಚ್ಛವಾದ, ಹಸಿರು ಭೂಮಿಯನ್ನು ಖಚಿತಪಡಿಸಿಕೊಳ್ಳೋಣ ಎಂದು ಪ್ರತಿಪಾದಿಸಿದರು.

BREAKING: ಉಳ್ಳಾಲದಲ್ಲಿ 10 ರಿಂದ 12 ಕೋಟಿ ಚಿನ್ನ, ಹಣ ದರೋಡೆ: ಪೊಲೀಸರನ್ನೇ ಬೆಚ್ಚಿ ಬೀಳಿಸಿದ ಪ್ರಾಥಮಿಕ ಮಾಹಿತಿ

BREAKING: ನಟ ಸೈಫ್ ಆಲಿಕಾನ್ ಐಸಿಯುನಿಂದ ‘ಸಾಮಾನ್ಯ ವಾರ್ಡ್’ಗೆ ಶಿಫ್ಟ್: ಪ್ರಾಣಾಪಾಯದಿಂದ ಪಾರು

Share. Facebook Twitter LinkedIn WhatsApp Email

Related Posts

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

1 Min Read

BREAKING : ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು!

2 Mins Read

BREAKING : ಈ ಸಲಾನು ಕಪ್ ನಮ್ದೇ : ರಾಜ್ಯಾದ್ಯಂತ RCB ಅಭಿಮಾನಿಗಳಿಂದ ಸಂಭ್ರಮಾಚರಣೆ, ಹಲವೆಡೆ ಲಾಠಿ ಚಾರ್ಜ್!

2 Mins Read
Recent News

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕಣ್ಗಾವಲು: ಕಳೆದ 24 ಗಂಟೆಗಳಲ್ಲಿ 28 ಹಡಗುಗಳ ಸುಗಮ ಸಂಚಾರ

ಪೆಟ್ರೋಲ್, ಡೀಸೆಲ್ ಮತ್ತು ಎಟಿಎಫ್ ರಫ್ತು ಸುಂಕ ಕಡಿತ: ಇಂದಿನಿಂದ ಜಾರಿಗೆ ಬರುವ ಹೊಸ ದರಗಳ ಮಾಹಿತಿ

IPL 2026: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಚ್ಚರಿಯ ನಂ.1 ವೈಭವ್ ಸೂರ್ಯವಂಶಿ; ವಿರಾಟ್ ಕೊಹ್ಲಿಗೆ 4ನೇ ಸ್ಥಾನ!

State News
KARNATAKA

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

By ಸುರೇಶ್‌ KARNATAKA 1 Min Read

ಮೈಸೂರು : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ…

BREAKING : ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು!

BREAKING : ಈ ಸಲಾನು ಕಪ್ ನಮ್ದೇ : ರಾಜ್ಯಾದ್ಯಂತ RCB ಅಭಿಮಾನಿಗಳಿಂದ ಸಂಭ್ರಮಾಚರಣೆ, ಹಲವೆಡೆ ಲಾಠಿ ಚಾರ್ಜ್!

ವಿಜಯಪುರದ ಸಿಂದಗಿ, ತಾಳಿಕೋಟೆಯ ಶಂಕಿತರ ನೆಲೆಗಳ ಮೇಲೆ NIA ಅಧಿಕಾರಿಗಳ ದಾಳಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.