Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM

‘ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ, ನೀವು ಮದುವೆಯಾಗಿರುವುದು ಜೀವನ ಸಂಗಾತಿಯನ್ನೇ ಹೊರತು ಕೆಲಸದವಳನ್ನಲ್ಲ’: ಸುಪ್ರೀಂ ಕೋರ್ಟ್

20/03/2026 10:00 PM

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು; ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲು- HDK
KARNATAKA

ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು; ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲು- HDK

By kannadanewsnow0929/10/2024 2:34 PM

ಬೆಂಗಳೂರು: ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ಕಳೆದ ಬಜೆಟ್ ಯುವಜನರಲ್ಲಿ ಕುಶಲತೆ ವೃದ್ಧಿಸುವ ನಿಟ್ಟಿನಲ್ಲಿ ₹3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪ್ರಧಾನಮಂತ್ರಿ ಉದ್ಯೋಗ ಮೇಳ (ರೋಜ್ ಗಾರ್ ಮೇಳ)ದ 2ನೇ ಹಂತದಲ್ಲಿ ದೇಶದಾದ್ಯಂತ ವಿವಿಧ ಕೇಂದ್ರ ಸರಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾದ 51,000 ಯುವಜನರಿಗೆ ದೇಶದ 40 ಸ್ಥಳಗಳಲ್ಲಿ ನೇರ ನೇಮಕಾತಿ ಪತ್ರ ನೀಡುವ ಕಾರ್ಯಕ್ರಮ ನಡೆಯಿತು. ಆನ್ಲೈನ್ ವೇದಿಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿಗಳು ಪಾಲ್ಗೊಂಡಿದ್ದರು ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಬೆಂಗಳೂರು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇಪ್ಪತೈದು ಯುವ ಜನರಿಗೆ ನೇಮಕಾತಿ ಪತ್ರ ವಿತರಿಸಿದ ನಂತರ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕೇಂದ್ರ ಸರಕಾರದ ಹನ್ನೆರಡು ಇಲಾಖೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗಿದೆ. 2047ನೇ ವರ್ಷಕ್ಕೆ ವಿಕಸಿತ ಭಾರತ್ ಗುರಿಯನ್ನು ಮುಟ್ಟಬೇಕು ಎನ್ನುವ ಛಲದೊಂದಿಗೆ ಮೋದಿ ಅವರು ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಹೆಚ್ಚು ಉತ್ತೇಜನ ಕೊಡುತ್ತಿದ್ದಾರೆ. ಅದಕ್ಕಾಗಿ ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲಿಡಲಾಗಿದೆ. ಈ ಹಣವೂ ನೇರವಾಗಿ MSME ಗಳಿಗೆ ನೇರವಾಗಿ ಬಿಡುಗಡೆ ಆಗುತ್ತದೆ ಎಂದು ಹೇಳಿದರು ಅವರು.

ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ್ ಪರಿಕಲ್ಪನೆಗಳ ಅಡಿಯಲ್ಲಿ ಮೋದಿ ಅವರು, ಉದ್ಯೋಗ ಸೃಷ್ಟಿಗೆ ದೊಡ್ಡ ಪ್ರಮಾಣದಲ್ಲಿ ಉತ್ತೇಜನ ಕೊಡುತ್ತಿದ್ದಾರೆ. ಉತ್ಪಾದನಾ ಸಂಪರ್ಕ ಉತ್ತೇಜನ ಯೋಜನೆ (PLI) ಮೂಲಕವೂ ಉದ್ಯೋಗ ಕ್ಷೇತ್ರದಲ್ಲಿ ದೊಡ್ಡ ಮುನ್ನಡೆ ಸಾಧಿಸಲಾಗುತ್ತಿದೆ. ಭಾರತವನ್ನು 3ನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ರೂಪಿಸಲು ಇಡೀ ಸಹಕಾರಿ ಆಗುತ್ತದೆ ಎಂದರು ಅವರು.

ಈ ಸಂದರ್ಭದಲ್ಲಿ ಅಂಚೆ ಇಲಾಖೆಯನ್ನು ಶ್ಲಾಘಿಸಿದ ಸಚಿವರು; ಮೊದಲ ಹಂತದ ಉದ್ಯೋಗ ಮೇಳದಲ್ಲಿ ಇಲಾಖೆಯು 30,000 ಯುವ ಜನರಿಗೆ ಉದ್ಯೋಗ ನೀಡಿದೆ. ಎರಡನೇ ಹಂತದಲ್ಲಿ 20,000 ಮಂದಿಗೆ ಉದ್ಯೋಗ ನೀಡಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್, ಅಂಚೆ ಇಲಾಖೆಯ ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಶ್ರೀ ರಾಜೇಂದ್ರ ಕುಮಾರ್ ಅವರು ಉಪಸ್ಥಿತರಿದ್ದರು.

BIG NEWS : ತಾಯಿಯ ಮರಣದ ನಂತರ ಮಗಳು `ಅನುಕಂಪದ ನೇಮಕಾತಿ’ಗೆ ಅರ್ಹ : ಹೈಕೋರ್ಟ್ ಮಹತ್ವದ ಆದೇಶ.!

BIG NEWS : ದೇವಸ್ಥಾನಗಳಲ್ಲಿ `VIP’ ದರ್ಶನ ಸಮಾನತೆಯ ಹಕ್ಕಿನ ಉಲ್ಲಂಘನೆ : ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ!

Share. Facebook Twitter LinkedIn WhatsApp Email

Related Posts

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM1 Min Read

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM2 Mins Read

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM1 Min Read
Recent News

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM

‘ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ, ನೀವು ಮದುವೆಯಾಗಿರುವುದು ಜೀವನ ಸಂಗಾತಿಯನ್ನೇ ಹೊರತು ಕೆಲಸದವಳನ್ನಲ್ಲ’: ಸುಪ್ರೀಂ ಕೋರ್ಟ್

20/03/2026 10:00 PM

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM

ಪುರುಷರೇ ಗಮನಿಸಿ: ಲೈಂಗಿಕ ಸಾಮರ್ಥ್ಯ ವೃದ್ಧಿಸಲು ಜೀವನಶೈಲಿಯಲ್ಲಿ ಈ 6 ಬದಲಾವಣೆಗಳನ್ನು ಮಾಡಿಕೊಳ್ಳಿ

20/03/2026 9:49 PM
State News
KARNATAKA

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

By kannadanewsnow0920/03/2026 10:12 PM KARNATAKA 1 Min Read

ಬೆಂಗಳೂರು: ಕಲಬುರಗಿಯ ಪಾಳಾದ ಶ್ರೀ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ನೀಡಲಾಗುವ 2026ನೇ ಸಾಲಿನ ರಾಜ್ಯಮಟ್ಟದ ಪ್ರತಿಷ್ಠಿತ…

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ: ಶಿವಮೊಗ್ಗ ಡಿಸಿ ವಾರ್ನಿಂಗ್

20/03/2026 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.