ಚಿತ್ರದುರ್ಗ: ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ( Murugha Sri ) ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಪೋಕ್ಸೋ ಕೇಸ್ ( POSCO Case ) ಬಳಿಕ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವಂತ ಲೇಡಿ ವಾರ್ಡನ್ ಅನ್ನು, ಇಂದು ನ್ಯಾಯಾಲಯವು ಸೆಪ್ಟೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಮುರುಘಾ ಶ್ರೀಗಳ ವಿರುದ್ಧಧ ಪೋಕ್ಸೋ ಕೇಸ್ ನಲ್ಲಿ ಮುರುಘಾ ಶರಣರನ್ನು ಈಗಾಗಲೇ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಬಳಿಕ 2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು.
ಇಂದು ಈ ಅರ್ಜಿಯ ವಿಚಾರಣೆ ನಡೆಸಿದಂತ ಚಿತ್ರದುರ್ಗದ ಜಿಲ್ಲಾ ಹೆಚ್ಚುವರಿ ನ್ಯಾಯಾಲಯವು, ಸೆಪ್ಟೆಂಬರ್ 8ರವರೆಗೆ 7 ದಿನಗಳ ಕಾಲ ಲೇಡಿ ವಾರ್ಡನ್ ರಶ್ಮಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಪ್ರವಾಹ ಪರಿಶೀಲನೆ ಸಭೆಯಲ್ಲಿ ‘ಸಚಿವ ಆರ್ ಅಶೋಕ್’ ಪುಲ್ ನಿದ್ದೆ: ‘ಚಿಂತೆ ಇಲ್ಲದವಗೆ ಸಂತೆಲೂ ನಿದ್ದೆ’ ಎಂದ ಕಾಂಗ್ರೆಸ್
ಅಂದಹಾಗೇ ಚಿತ್ರದುರ್ಗದಲ್ಲಿ ಮಹಿಳಾ ಕಾರಾಗೃಹ ಇಲ್ಲದ ಕಾರಣ, 2ನೇ ಆರೋಪಿ ರಶ್ಮೀಯನ್ನು ಶಿವಮೊಗ್ಗದಲ್ಲಿರುವಂತ ಮಹಿಳಾ ಕಾರಾಗೃಹದಲ್ಲಿ ಇರಿಸಲಾಗಿದೆ. ಇದೀಗ ಕೋರ್ಟ್ ಆದೇಶದಿಂದಾಗಿ ಅವರನ್ನು ತಮ್ಮ ವಶಕ್ಕೆ ಪಡೆಯಲಿರುವಂತ ಪೊಲೀಸರು, ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಕೇಸ್ ನಲ್ಲಿ ವಿಚಾರಣೆಯನ್ನು ನಡೆಸಲಿದ್ದಾರೆ.