ಚಿತ್ರದುರ್ಗ: ಜಿಲ್ಲೆಯ ಮುರುಘಾಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಹೀಗಾಗಿ ನವೆಂಬರ್.26ರಂದು ಮುರುಘಾಶ್ರೀ ಪ್ರಕರಣದ ತೀರ್ಪನ್ನು ಕೋರ್ಟ್ ಪ್ರಕಟಿಸಲಿದೆ.
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಸಂಬಂಧ ಜೈಲು ಪಾಲು ಆಗಿದ್ದರು. ಪ್ರಕರಣದ ವಿಚಾರಣೆಯನ್ನು ಚಿತ್ರದುರ್ಗದ 2ನೇ ಅಪರ ಸೆಷನ್ಸ್ ಕೋರ್ಟ್ ನಡೆಸಿತ್ತು. ವಾದ-ಪ್ರತಿವಾದ ಆಲಿಸಿದ್ದಂತ ಕೋರ್ಟ್, ನವೆಂಬರ್.26ರಂದು ತೀರ್ಪು ಪ್ರಕಟಿಸುವುದಾಗಿ ದಿನಾಂಕ ನಿಗದಿ ಪಡಿಸಿದೆ.
ಸರ್ಕಾರಿ ವಕೀಲ ಜಗದೀಶ್ ಅವರಿಂದ ಪ್ರತಿ ವಾದ ಮಂಡನೆ ಮುಕ್ತಾಯಗೊಂಡ ಹಿನ್ನಲೆಯಲ್ಲಿ, ತೀರ್ಪನ್ನು ನ್ಯಾಯಮೂರ್ತಿ ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರು ಕಾಯ್ದಿರಿಸಿದ್ದಾರೆ. ನವೆಂಬರ್.26ರಂದು ಮುರುಘಾಶ್ರೀ ವಿರುದ್ಧದ ಪೋಕ್ಸೋ ಕೇಸ್ ತೀರ್ಪು ಪ್ರಕಟಿಸಲಿದ್ದಾರೆ.
GOOD NEWS: ಅಂಗನವಾಡಿ ಕಾರ್ಯಕರ್ತೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: 1,000 ಗೌರವಧನ ಹೆಚ್ಚಳ
ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ








