ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸ್ ಪ್ರಕರಣದಲ್ಲಿ ಕೋರ್ಟ್ ಬಿಗ್ ಶಾಕ್ ನೀಡಿದೆ. ಜುಲೈ.15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಇತರೆ ಆರೋಪಿಗಳಿಗೆ ಸಮನ್ಸ್ ಜಾರಿಗೆ ಆದೇಶಿಸಿದೆ.
ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯ ನಡೆಸಿತು. ಕೋರ್ಟ್ ಗೆ ಪೊಲೀಸರು ಪೋಕ್ಸೋ ಪ್ರಕರಣದಲ್ಲಿ ಸಲ್ಲಿಸಿದ್ದಂತ ಆರೋಪ ಪಟ್ಟಿಯನ್ನು ವಿಚಾರಣೆಗೆ ನ್ಯಾಯಪೀಠವು ಪರಿಗಣಿಸಿತು.
ಈ ಬಳಿಕ ಜುಲೈ.15ರಂದು ಕೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಇತರೆ ಆರೋಪಿಗಳು ಹಾಜರಾಗುವಂತೆ ಸಮನ್ಸ್ ಜಾರಿಗೆ ಆದೇಶಿಸಿತು. ಹೀಗಾಗಿ ಜುಲೈ.15ರಂದು ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಪ್ರಕರಣದಲ್ಲಿ ಖುದ್ದು ಕೋರ್ಟ್ ಗೆ ವಿಚಾರಣೆಗೆ ಹಾಜರಾಗಬೇಕಿದೆ.
BIG NEWS: ಕಾವೇರಿ ನದಿಗೆ ಕಲುಷಿತ ನೀರು: ಅಧ್ಯಯನಕ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ