ಬೆಳಗಾವಿ : ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈಗ ಈ ಒಂದು ನೋಟಿಸ್ ಗೆ ಪ್ರತಿಕ್ರಿಯೆ ನೀಡಿದ, ಬಿಎಸ್ ಯಡಿಯೂರಪ್ಪ ನಾನು ದೆಹಲಿಗೆ ತೆರಳುತ್ತಿದ್ದೂ, ಜೂನ್ 17ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ವಿಚಾರಣೆಗೆ ಹಾಜರಾಗಿ ಎಂದು ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮಕ್ಕೆ ದೆಹಲಿಗೆ ತೆರಳುತ್ತಿದ್ದೇನೆ. ಜೂನ್ 17 ರಂದು ವಿಚಾರಣೆಗೆ ಹಾಜರಾಗುತ್ತೇನೆಂದು. ಈ ಹಿಂದೆಯೂ ನಾನು ತನಿಖೆಗೆ ಹಾಜರಾಗಿ ಸಹಕರಿಸಿದ್ದೇನೆ.ಇಂದಿನ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ, ತಾವು ಯಾವುದೇ ಕಾನೂನು ಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸ ಆಗಿದೆ. ಎಫ್ಐಆರ್ ದಾಖಲಾದ ನಂತರ ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ನಾನು ಹಾಜರಾಗಿದ್ದೆ ಎಂದು ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಸಿಸಿದ್ದಾರೆ.
ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಳು.
ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ ಮರುದಿನ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ, ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತಂಡದ ವತಿಯಿಂದ ತನಿಖೆಗೊಳಪಟ್ಟಿರುವ ಈ ಪ್ರಕರಣದಲ್ಲಿ ಅಧಿಕಾರಿಗಳು ಸಂತ್ರಸ್ತೆ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ. ಹಾಗಾಗಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ ಕೂಡಲೇ ಯಡಿಯೂರಪ್ಪ ಅವರು ಪ್ರಕರಣದ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.