ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನೊಂದೆಡೆ ಮುರುಘಾ ಮಠಕ್ಕೆ ನೇಮಕ ಮಾಡಲಾಗಿರುವ ಆಡಳಿತಾಧಿಕಾರಿ ಆದೇಶವನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಸವಪ್ರಭು ಶ್ರೀಗಳು ಮನವಿ ಮಾಡಿದ್ದಾರೆ.
ಇದರ ನಡುವೆ ಪೋಕ್ಸೋ ಪ್ರಕರಣ ಪ್ರಮುಖ ಆರೋಪಿ ಮುರುಘಾ ಶ್ರೀಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹ ಕೇಳಿಬಂದಿದೆ.
ಮುರುಘಾಶ್ರೀ ಅವರನ್ನು ಗಲ್ಲಿಗೇರಿಸಲು ಒತ್ತಾಯಿಸಿ ನಗರದಲ್ಲಿ ಬಹುಜನ ಸಮಾಜ ಪಕ್ಷ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು BSP ಮುಖ್ಯಸ್ಥ ಮಾರಸಂದ್ರ ಮುನಿಯಪ್ಪ ನೇತೃತ್ವದಲ್ಲಿ ಧರಣಿ ನಡೆದಿದೆ. ಈ ವೇಳೆ ಮುರುಘಾಶ್ರೀ ವಿರುದ್ಧದ ಫೋಕ್ಸೋ ಕೇಸ್ ನ್ಯಾಯಾಂಗ ತನಿಖೆಗೆ ವಹಿಸಲು ಆಗ್ರಹಿಸಲಾಗುತ್ತಿದೆ. ಮಠದ ಹಾಸ್ಟೆಲ್ನಿಂದ ಕಾಣೆಯಾದ 32 ಮಕ್ಕಳನ್ನು ಪತ್ತೆ ಮಾಡಿ ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.
ಇನ್ನೂ, ಬಸವಪ್ರಭು ಶ್ರೀಗಳು ಮುರುಘಾ ಮಠಕ್ಕೆ ನೇಮಕ ಮಾಡಲಾಗಿರುವ ಆಡಳಿತಾಧಿಕಾರಿ ಆದೇಶವನ್ನು ವಾಪಸ್ ಪಡೆಯಿರಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನೇಮಕ ಮಾಡಿರುವ ಆಡಳಿತಾಧಿಕಾರಿ ನಿಯೋಜನೆ ಆದೇಶವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಡಿ.26ರಂದು ಮಠಾಧೀಶರಿಂದ ಧರಣಿಯನ್ನು ಮಾಡಲು ನಿರ್ಧರಿಸಲಾಗಿದೆ ಎಂದು ಎಚ್ಚರಿಕೆ ನೀಡಿದರು. ಮುರುಘಾಮಠಕ್ಕೆ ( Murugha Matt ) ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತಾಧಿಕಾರಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ, ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕವನ್ನು ರದ್ದುಗೊಳಿಸುವಂತೆ ಕೋರಲಾಗಿತ್ತು.ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ಮಾಡಲಾಗಿತ್ತು. ಈ ನೇಮಕ ಪ್ರಶ್ನಿಸಿ ಚಿತ್ರದುರ್ಗದ ಡಿಎಸ್ ಮಲ್ಲಿಕಾರ್ಜುನ ಮತ್ತಿತ್ತರರು ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ರಿಟ್ ಅರ್ಜಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕ ರದ್ದುಪಡಿಸಬೇಕು. ಈಗಾಗಲೇ ಡಾ.ಶಿವಮೂರ್ತಿ ಮುರುಘಾ ಶರಣರು ಶಿಕ್ಷಣ ಸಂಸ್ಥೆಗಳಿಗೆ ನಿವೃತ್ತ ನ್ಯಾಯಾಧೀಶರಿಗೆ ಜಿಪಿಎ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಬಸವಪ್ರಭು ಸ್ವಾಮೀಜಿಗೆ ಜಿಪಿಎ ನೀಡಲಾಗಿದೆ ಎಂದಿದ್ದಾರೆ.ಇನ್ನೂ ಮಠಾಧಿಪತಿ ಜೈಲಿನಲ್ಲಿರುವುದನ್ನು ಕಾರಣವಾಗಿ ಆಡಳಿತಾಧಿಕಾರಿ ನೇಮಿಸುವುದು ಸಕಾರಣವಲ್ಲ. ಹೀಗಾಗಿ ರಾಜ್ಯ ಸರ್ಕಾರ ನೇಮಿಸಿರುವಂತ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸುವಂತೆ ಕೋರಿದ್ದರು.
BIGG NEWS : ಜನದಟ್ಟಣೆ ಪ್ರದೇಶಗಳಲ್ಲಿ ‘ಮಾಸ್ಕ್’ ಕಡ್ಡಾಯ : ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ..?