ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕ ಬೆನ್ನಲ್ಲೇ ಕಳೆದ ಎರಡು ದಿನಗಳಿಂದ ಅಜ್ಞಾತ ಸ್ಥಳದಲ್ಲಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಕಳೆದ ಎರಡು ದಿನಗಳಿಂದ ಅಜ್ಞಾತ ಸ್ಥಳದಲ್ಲಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದು, ಇಂದು ಮಧ್ಯಾಹ್ನ ೧೨ ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಸಿಐಡಿಗೆ ಹೈಕೋರ್ಟ್ ಸೂಚಿಸಿದೆ.