ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಂದು ಸಿಐಡಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.
ತಮ್ಮ ಮನೆಗೆ ಸಹಾಯ ಕೋರಿ ತಾಯಿ ಜತೆ ಬಂದಿದ್ದಾಗ 17 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪನವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ CID ಪೊಲೀಸರು, ನ್ಯಾಯಾಲಯಕ್ಕೆ ಯಡಿಯೂರಪ್ಪನವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಮುಂದಾಗಿದ್ದಾರೆ.
ದೂರು ನೀಡಿದ ಸಂತ್ರಸ್ತೆ ಇದೀಗ ಸಾವನ್ನಪ್ಪಿದ್ದು ಆಕೆಯ ಸಹೋದರ ಈಗ ಬಿಎಸ್ ಯಡಿಯೂರಪ್ಪ ವಿರುದ್ಧ ಕಾನೂನು ಹೋರಾಟ ಮಾಡುತ್ತಿದ್ದು, ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ ಎಂದು ಹೇಳಲಾಗುತ್ತಿದೆ.