ಮೈಸೂರು: ರಾಜ್ಯದಲ್ಲಿ ಶೀಘ್ರವೇ ಜಮೀನಿನ ಮಾಲೀಕತ್ವಕ್ಕೆ ನೆಮ್ಮದಿಯ ಗ್ಯಾರಂಟಿ ನೀಡಲಾಗುತ್ತದೆ. ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಇಂದು ಮೈಸೂರಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದಂತ ಅವರು, ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್‌ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ 1.37 ಕೋಟಿ ಆರ್‌ಟಿಸಿ ಮಾಲೀಕರಿದ್ದು ಈ ಪೈಕಿ 36 ಲಕ್ಷ ಆರ್‌ಟಿಸಿಗಳನ್ನು ಮಾತ್ರ ಆಧಾರ್ ಜೊತೆಗೆ ಜೋಡಿಸಲಾಗಿದೆ. ಅಂದರೆ ಶೇ. 35 ರಷ್ಟು ಕೆಲಸ ಮಾತ್ರ ಆಗಿದ್ದು, ಇದು ಸಾಲದು. ಇದೇ ಜುಲೈ ತಿಂಗಳ ಒಳಗಾಗಿ ಆಧಾರ್ ಸೀಡಿಂಗ್ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ತಿಳಿಸಿದರು.
ಆರ್‌ಟಿಸಿಗಳನ್ನು ಆಧಾರ್‌ಗೆ ಲಿಂಕ್ ಮಾಡುವ ಮೂಲಕ ಯಾರದ್ದೋ ಜಮೀನನ್ನು ಮತ್ಯಾರೋ ಮಾರಾಟ ಮಾಡುವಂತಹ ವಂಚನೆಗಳನ್ನು ತಡೆಯಬಹುದು. ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರ ತಲುಪಿಸಲು ಹಾಗೂ ಮ್ಯುಟೇಶನ್, ಇನ್ಪುಟ್ ಸಬ್ಸಿಡಿ ನೀಡುವುದಕ್ಕೂ ಇದು ಸಹಕಾರಿಯಾಗುತ್ತದೆ. ಹೀಗಾಗಿ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಪ್ಪಿಸಿ ಆಧಾರ್ ಜೋಡಣೆ ಮಾಡಬೇಕು. ಸಾರ್ವಜನಿಕರೂ ಸಹ ತನಮ್ಮ ಜಮೀನಿನ ಮಾಲೀಕತ್ವಕ್ಕೆ ಭದ್ರತೆ ಅಗತ್ಯವಿದ್ದರೆ ಅಭಿಯಾನಕ್ಕೆ ರೈತರು ಮುಂದೆ ಬಂದು ಸಹಕಾರ ನೀಡಬೇಕು. ಇದರ ಮೂಲಕ ನಕಲಿ ವ್ಯವಹಾರ ಆಗುವುದನ್ನು ತಡೆಯಬಹುದು. ಜಮೀನಿನ ಮಾಲೀಕತ್ವಕ್ಕೆ ನೆಮ್ಮದಿಯ ಗ್ಯಾರಂಟಿ ನೀಡಬಹುದು ಎಂದು ಅವರು ಕರೆ ನೀಡಿದರು.
ಶೀಘ್ರ ಪೋಡಿ ಮುಕ್ತ ಗ್ರಾಮ ಅಭಿಯಾನ
ರಾಜ್ಯದಲ್ಲಿ ಶೀಘ್ರ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಈ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, “ರಾಜ್ಯದಲ್ಲಿ 22 ಲಕ್ಷ ಖಾಸಗಿ ಆರ್‌ಟಿಸಿ ಗಳಿಗೆ ಪೋಡಿ ಆಗಿಲ್ಲ. ಪ್ರತಿಯೊಂದು ಆರ್‌ಟಿಸಿಯಲ್ಲಿ ಮೂರು ರಿಂದ ನಾಲ್ಕು ಜನ ಆರ್‌ಟಿಸಿ ಮಾಲೀಕರು ಇರುತ್ತಾರೆ. ಈ ಜಮೀನುಗಳ ಪೋಡಿ ಆಗಿಲ್ಲ. ಇನ್ನೂ ಸರ್ಕಾರಿಂದ ಭೂ ಮಂಜೂರಾದವ ಜಮೀನುಗಳೂ ಪೋಡಿ ಆಗಿಲ್ಲ. ಹೀಗಾಗಿ ಪೋಡಿ ಮುಕ್ತ ಅಭಿಯಾನದ ಅಡಿಯಲ್ಲಿ ಇಂತಹ ಜನರನ್ನು ನಾವೇ ಗುರುತಿಸಿ ಸರ್ಕಾರದಿಂದ ನಾವೇ ಪೋಡಿ ಮಾಡಿಕೊಡಲಿದ್ದೇವೆ. ಕೇಸ್ ಬೈ ಕೇಸ್ ಮಾಡುವುದರಿಂದ ಬಡವರಿಗೆ ಅನುಕೂಲವಾಗಲ್ಲ. ಹೀಗಾಗಿ ಪೋಡಿ ಮುಕ್ತ ಗ್ರಾಮಗಳ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಿದಂತೆ ಪೋಡಿಮುಕ್ತ ಅಭಿಯಾನಕ್ಕೆ ಶೀಘ್ರವೇ ಚಾಲನೇ ನೀಡಲಾಗುವುದು ಎಂದರು.
BIG NEWS: ರಾಜ್ಯಾದ್ಯಂತ ‘ಅತಿವೃಷ್ಟಿ ತಡೆ’ಗೆ ಪಂಚಾಯತ್ ಮಟ್ಟದಲ್ಲೇ ‘ಟಾಸ್ಕ್‌ಫೋರ್ಸ್’ ರಚನೆ: ಸಚಿವ ಕೃಷ್ಣ ಬೈರೇಗೌಡ