ಕೊಲ್ಲಂ (ಕೇರಳ): ದೇಶದಲ್ಲಿ ಭಾನುವಾರ ನಡೆದ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ನಡೆದಿತ್ತು. ಈ ವೇಳೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ತಪಾಸಣೆ ವೇಳೆ ಯುವತಿಯರಿಗೆ ಒಳಉಡುಪು ತೆಗೆದು ಪರೀಕ್ಷೆಗೆ ಹಾಜರಾಗುವಂತೆ ಒತ್ತಾಯಿಸಲಾಗಿತ್ತು. ಈ ಬಗ್ಗೆ ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ, ಇಂತಹ ಸೂಚನೆ ನೀಡಿದವರ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ.
ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 354 [ಹೆಣ್ಣಿನ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ] ಮತ್ತು 509 [ಮಹಿಳೆಯರ ನಮ್ರತೆಗೆ ಅವಮಾನ ಮಾಡುವ ಉದ್ದೇಶದಿಂದ ಪದ, ಸನ್ನೆ ಅಥವಾ ಕೃತ್ಯ] ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಆಯುರ್ನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆಗೆ ಹಾಜರಾಗುವ ವೇಳೆ ಅವಮಾನಕರ ಅನುಭವವನ್ನು ಎದುರಿಸಿದ ಬಾಲಕಿಯ ದೂರು ನೀಡಿದ್ದಳು. ಮಹಿಳಾ ಅಧಿಕಾರಿಗಳ ತಂಡವು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮೊಟ್ಟಮೊದಲ ಬಾರಿಗೆ ನೀಟ್ ಪರೀಕ್ಷೆಗೆ ಕುಳಿತಿದ್ದ ತನ್ನ ಮಗಳು ತಾನು ಕುಳಿತಿದ್ದ ಆಘಾತಕಾರಿ ಅನುಭವದಿಂದ ಇನ್ನೂ ಹೊರಬಂದಿಲ್ಲ ಎಂದು 17 ವರ್ಷದ ಬಾಲಕಿಯ ತಂದೆ ಮಾಧ್ಯಮಗಳಿಗೆ ಸೋಮವಾರ ತಿಳಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.
NEET ಬುಲೆಟಿನ್ನಲ್ಲಿ ಉಲ್ಲೇಖಿಸಲಾದ ಡ್ರೆಸ್ ಕೋಡ್ ಪ್ರಕಾರವೇ ನನ್ನ ಮಗಳು ಬಟ್ಟೆ ಧರಿಸಿದ್ದಳು. ಆದ್ರೆ, ಅಲ್ಲಿ ಒಳ ಉಡುಪುಗಳ ಬಗ್ಗೆ ಏನನ್ನೂ ಹೇಳಿಲ್ಲ ಎಂದು ಬಾಲಕಿಯ ತಂದೆ ತಿಳಿಸಿದ್ದಾರೆ.
ಫೇಸ್ಬುಕ್ನಲ್ಲಿ ಭಯೋತ್ಪಾದಕ ಗುಂಪು ʻಉಲ್ಫಾ-Iʼನ್ನು ಬೆಂಬಲಿಸಿದ ಅಸ್ಸಾಂ ವಿದ್ಯಾರ್ಥಿಯ ಬಂಧನ