ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸರು ಉತ್ತಮ ನಡೆಯನ್ನು ಸಾರ್ವಜನಿಕ ಜೀವನದಲ್ಲಿ ತೋರಬೇಕು. ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿರಬಾರದು ಎಂಬುದಾಗಿ ಖಡಕ್ ಎಚ್ಚರಿಕೆಯ ಆದೇಶವನ್ನೇ ಮಾಡಿದೆ. ಹೀಗಿದ್ದರೂ ಇಲ್ಲೊಬ್ಬ ಪೊಲೀಸ್ ಪೇದೆ ಮಾತ್ರ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಗಲಾಕೊಂಡಿದ್ದಾನೆ.
ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣೆಯ ಯಮನಾ ನಾಯಕ್ ಎಂಬಾತನೇ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳದ ಆರೋಪದಡಿ ಬಂಧಿತನಾಗಿರುವಂತ ಕಾನ್ ಸ್ಟೇಬಲ್ ಆಗಿದ್ದಾರೆ. ಇವರು ಕರ್ತವ್ಯದ ವೇಳೆಯಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಅಂದಹಾಗೇ ಆರ್.ಟಿ ನಗರ ಪೊಲೀಸ್ ಠಾಣೆಯ ಕಾನ್ಸ್ ಸ್ಟೇಬಲ್ ಯಮನಾ ನಾಯಕ್ ಅವರನ್ನು ಫ್ರೀಡಂ ಪಾರ್ಕ್ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಸಂತ್ರಸ್ತೆ ಉಪ್ಪಾರಪೇಟೆ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೇದೆ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ, ಬಂಧಿಸಲಾಗಿದೆ.
ಇನ್ಮುಂದೆ ಸರ್ಕಾರಿ ಅಧಿಕಾರಿಗಳು ‘ಜನಪ್ರತಿನಿಧಿ’ಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ








