ಫಿರೋಜ್ಪುರ: ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ದಗ್ರು ಗ್ರಾಮದ ಬಳಿ 32 ವರ್ಷದ ಪಂಜಾಬ್ ಪೊಲೀಸ್ ಕಾನ್ಸ್ಟೇಬಲ್ ಮಹಿಳಾ ಸಹೋದ್ಯೋಗಿಯನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕಾನ್ಸ್ಟೇಬಲ್ ಗುರುಸೇವಕ್ ಸಿಂಗ್ ಎಂದು ಗುರುತಿಸಲಾಗಿದ್ದು, ಎಲೈಟ್ ಕಮಾಂಡೋ ಪಡೆ ಸ್ವಾಟ್ ತಂಡದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ತಡರಾತ್ರಿ ತನ್ನ ಎಕೆ -47 ಅಸಾಲ್ಟ್ ರೈಫಲ್ನಿಂದ ತನ್ನ ಮಹಿಳಾ ಸಹೋದ್ಯೋಗಿಯ ಎದೆಗೆ ನಾಲ್ಕು ಸುತ್ತು ಗುಂಡು ಹಾರಿಸುವ ಮೂಲಕ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಯ ನಂತರ ಸಿಂಗ್ ಸ್ಥಳದಿಂದ ಪರಾರಿಯಾಗಿದ್ದು, ದಾಗ್ರು ಗ್ರಾಮದ ಬಳಿ ಅದೇ ರೈಫಲ್ ಬಳಸಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಗ್ ನೌರಂಗ್ ಕೆ ಸಿಯಾಲ್ ಗ್ರಾಮದವರಾಗಿದ್ದರೆ, ಮಹಿಳಾ ಕಾನ್ಸ್ಟೇಬಲ್ ಅನ್ನು 26 ವರ್ಷದ ಅಮನ್ಪ್ರೀತ್ ಕೌರ್ ಎಂದು ಗುರುತಿಸಲಾಗಿದೆ.