ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್ನ ಆರೋಪಿಗಳಾದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದ್ದು, ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ಮೂರನೇ ಬಾರಿಗೆ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯದ ಎದುರು ಇಂದು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯಲ್ಲಿ ಪ್ರಕರಣ ಸಂಬಂದ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಜೂನ್ 11ರ ಮುಂಜಾನೆ ದರ್ಶನ್ ಅವರನ್ನು ಮೈಸೂರಿನ ಹೊಟೇಲ್ ನಲ್ಲಿ ಜಿಮ್ ಮಾಡುತ್ತಿದ್ದವರನ್ನು ಬಂಧಿಸಲಾಗಿತ್ತು. ಬಳಿಕ ಪವಿತ್ರಾ ಗೌಡ ಸೇರಿ ಹಲವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.