ಬೆಂಗಳೂರು: ಮದ್ಯಪಾನ ಚಾಲನೆಯ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳುವ ಬಗ್ಗೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಬೆಂಗಳೂರು ನಗರದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಸಂಚಾರ ವಿಭಾಗದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ವಾರಾಂತ್ಯದ ಗುರುವಾರದಿಂದ ಭಾನುವಾರದವರೆಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ವಾಹನ ಸವಾರರು/ಚಾಲಕರುಗಳ ವಿರುದ್ಧ ಪ್ರತಿವಾರ ಠಾಣೆಯ ಎಲ್ಲಾ ಪಿ.ಎಸ್.ಐ ರವರುಗಳು ಕಡ್ಡಾಯವಾಗಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲು ಕ್ರಮ ವಹಿಸುವುದು.
ಪಕರಣಗಳನ್ನು ದಾಖಲಿಸಲು ಠಾಣಾ ವ್ಯಾಪ್ತಿಯಲ್ಲಿ ಸಿ.ಸಿ.ಟಿ.ವಿ. ಕ್ಯಾಮರಾಗಳನ್ನು ಅಳವಡಿಸಿರುವ ಜಂಕ್ಷನ್‌ಗಳಲ್ಲಿ ಮಾತ್ರ ಪ್ರಕರಣಗಳನ್ನು ದಾಖಲಿಸುವುದು ಹಾಗೂ ದಾಖಲಿಸುವ ಸಮಯದಲ್ಲಿ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿಗಳನ್ನೂ ಸಹ ಕಾರ್ಯಾಚರಣೆಗೆ ನೇಮಿಸಲು ಈ ಮೂಲಕ ಸೂಚಿಸಲಾಗಿದೆ. ಎಂ.ಎನ್. ಅನುಚೇತ್.ಐ.ಪಿ.ಎಸ್ ಜಂಟಿ ಪೊಲೀಸ್ ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.