ಬೆಂಗಳೂರು : ಬೆಂಗಳೂರಲ್ಲಿ ಯುವತಿಯೋಬ್ಬಳು ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದಳು. ಈ ವೇಳೆ ಏಕಾಏಕಿ ಪೊಲೀಸರು ಹೋಟೆಲ್ ಗೆ ಎಂಟ್ರಿ ಆಗಿದ್ದಾರೆ. ಆಗ ಭಯದಿಂದ ಯುವತಿ ಒಬ್ಬಳು ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಚ್‌ಎಎಲ್‌ನ ಎಇಸಿಎಸ್ ಲೇಔಟ್ ನ ಹೊಟೇಲ್‌ನಲ್ಲಿ ನಡೆದಿದೆ.
ವೀಕೆಂಡ್‌ನಲ್ಲಿ ಸ್ನೇಹಿತರೊಂದಿಗೆ ಹೋಟೆಲ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ಧಿಡೀರ್ ಎಂಟ್ರಿ ಕೊಟ್ಟ ಪರಿಣಾಮ ಭಯಗೊಂಡ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿದ್ದಾಳೆ. ಘಟನೆಯಲ್ಲಿ ಯುವತಿಯ ತಲೆ, ಮೈಕೈಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಂಭೀರ ಗಾಯಗೊಂಡಿರುವ ಯುವತಿಯನ್ನು ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಶನಿವಾರ ರಾತ್ರಿ ಯುವತಿ ಸೇರಿದಂತೆ ಎಂಟು ಜನ ಸ್ನೇಹಿತರು ಸೇರಿ ಪಾರ್ಟಿ ಆಯೋಜಿಸಿದ್ದರು. ಪಾರ್ಟಿಗಾಗಿ ಮೂರು ರೂಂಗಳನ್ನು ಬುಕ್ ಮಾಡಿದ್ದರು. ಬಳಿಕ ಯುವಕರು ಹಾಗೂ ಯುವತಿಯರು ಹಾಡುಗಳನ್ನ ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಯುವಕರ ಪಾರ್ಟಿ, ಡ್ಯಾನ್ಸ್ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಏಕೆಂದರೆ ಗೋವಾದಲ್ಲಿ ಕ್ಲಬ್ ನಲ್ಲಿ ಅಗ್ನಿ ದುರಂತ ಸಂಭವಿಸಿ 25 ಜನರು ಸಾವನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಪೋಲೀಸರು ಅಲರ್ಟ್ ಆಗಿದ್ದಾರೆ ಹಾಗಾಗಿ ಏಕಾಏಕಿ ಹೋಟೆಲ್ಗೆ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ.
ಪಾರ್ಟಿ ವಿಚಾರ ತಿಳಿದು ಹೊಯ್ಸಳ ಸಿಬ್ಬಂದಿ ಹೊಟೇಲ್‌ಗೆ ಎಂಟ್ರಿ ಕೊಟ್ಟ ವೇಳೆ ಪಾರ್ಟಿ ವೀಡಿಯೋ ತೋರಿಸಿ ದೂರು ಬಂದಿದೆ ಎಂದಿದ್ದರು. ನಂತರ ಯುವಕರ ಬಳಿ ಹಣ ಕೇಳಿದ್ದಾರೆ ಎಂದು ಯುವಕನೊಬ್ಬ ಆರೋಪಿಸಿದ್ದಾನೆ. ಫೋನ್ ಪೇ ಮಾಡುತ್ತೇವೆ ಎಂದು ಯುವಕರು ಹೇಳಿದಾಗ ಫೋನ್ ಪೇ ಬೇಡ, ಕ್ಯಾಶ್ ಕೊಡಿ ಎಂದು ಪೊಲೀಸರು ಕೇಳಿದ್ದಾರೆ. ಸರಿ ಎಂದು ಎಟಿಎಂನಲ್ಲಿ ಹಣ ತರುತ್ತೇನೆ ಎಂದು ಯುವಕ ಹೋಟೆಲ್‌ನಿಂದ ಹೊರಗೆ ಬಂದ ವೇಳೆ ಯುವತಿ ಹೋಟೆಲ್ ಬಾಲ್ಕನಿಯಿಂದ ಹಾರಿದ್ದಾಳೆ.








