ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ನಂದೀಶ್ ಹೃದಯಾಘಾತ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣ ತನಿಖೆ ಆಗಬೇಕು. ಅದು ಒಂದು ಬಾರ್ ವಿಚಾರಕ್ಕೆ ಅಮಾನತು ಮಾಡುವಷ್ಟೇ ನಡೆದಿಲ್ಲ. ಇದರ ಹಿಂದೆ ಇನ್ನೂ ಬೇರೇನೋ ಇದ್ದಂತಿದೆ ಎಂದು ಹೇಳಿದ್ದಾರೆ.
ಒಂದು ಪೋಸ್ಟಿಂಗ್ ಗೆ 70 ಲಕ್ಷ ರೂಪಾಯಿಯಿಂದ 2 ಕೋಟಿ ತನಕ ಹಣದ ವಿಚಾರ ಇದೆ. ಇದು ಬಿಜೆಪಿಯ ಸಂಸ್ಕೃತಿ. ಇದು ಗಂಭೀರವಾದ ವಿಚಾರವಾಗಿದೆ. ನಂದೀಶ್ ಅಮಾನತಿನ ಹಿಂದೆ ಅಷ್ಟೇ ಇದ್ದಂತೆ ಇಲ್ಲ, ಅದಕ್ಕಿಂತ ಹೆಚ್ಚಿನದು ಬೇರೆನೋ ಇದೆ. ಹೀಗಾಗಿ ಅವರ ಸಾವಿನ ತನಿಖೆ ಆಗಲೇಬೇಕು ಎಂದು ಹರಿಪ್ರಸಾದ್ ಆಗ್ರಹಿಸಿದ್ದಾರೆ.