Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !

19/02/2026 7:08 AM

ಕಿರಣಾ ಹಿಲ್ಸ್ ಮೇಲೆ ವಿನಾಶದ ಮಳೆ: ‘ಆಪರೇಷನ್ ಸಿಂಧೂರ್’ ರಹಸ್ಯ ಈಗ ಬಹಿರಂಗ!

19/02/2026 7:04 AM

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧವೆಂದ ಸಿಎಂ
KARNATAKA

ರಾಜ್ಯದಲ್ಲಿ 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧವೆಂದ ಸಿಎಂ

By kannadanewsnow0917/01/2026 5:44 PM

ಬೆಂಗಳೂರು : ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.

ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದರು.

2003 ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ, ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೋಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದರು.

ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು

ಪೋಲೀಸ್ ಸಬ್ ಇನ್ಸ್ಪೆಕ್ಟರ್, ಎ ಎಸ್ ಪಿ, ಡಿ ವೈ ಎಸ್ ಪಿ , ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು ಎಂದು ಸೂಚಿಸಲಾಗಿದೆ ಎಂದರು.

ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು

ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತಾ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.

ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು

ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿ ಪಡಿಸಿದರೆ ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಲಾಗಿದೆ. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ ವಿದೇಶಿಯರನ್ನು ಯಾವುದೇ ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಪೋಲೀಸ್ ಠಾಣೆಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಬೇಕು

ಪೋಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಡಿ ವೈ ಎಸ್ ಪಿ ಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು.

ಡ್ರಗ್ಸ್ ಪತ್ತೆ ಹಚ್ಚುವಲ್ಲಿ ವಿಫಲರಾದ ಪೊಲೀಸರ ಮೇಲೆ ಕ್ರಮಕ್ಕೆ ಸೂಚನೆ

ಮಹಾರಾಷ್ಟ್ರದ ಪೊಲೀಸರಿಗೆ ಬೆಂಗಳೂರಿಗೆ ಬಂದು ಡ್ರಗ್ಸ್ ಪತ್ತೆಹಚ್ಚಲು ಸಾಧ್ಯವಾದರೆ, ರಾಜ್ಯದ ಪೊಲೀಸರು ಏಕೆ ಮಾಡಬಾರದು? ರಾಜ್ಯದ ಪೊಲೀಸರು ಇದನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದು, ಸಂಬಂಧಪಟ್ಟ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕು

ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕಾಗುತ್ತದೆ. ಹೊಸ ಕಾನೂನು ಅಥವಾ ತಿದ್ದುಪಡಿಯನ್ನು ಮುಂಬರುವ ದಿನಗಳಲ್ಲಿ ಮಾಡಬೇಕಾಗುತ್ತದೆ ಎಂದರು.

ಐಪಿಎಲ್ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಡಿ ಮೈಕಲ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ, ಅವರ ಶಿಫಾರಸ್ಸುಗಳನ್ನು ಪಾಲಿಸಲು ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ. ಅವರು ಅಲ್ಪಾವಧಿ ಶಿಫಾರಸ್ಸುಗಳನ್ನು ಕೂಡಲೆ ಜಾರಿಗೆ ತರಬೇಕು ಹಾಗೂ ದೀರ್ಘಾವಧಿಯಲ್ಲಿ ಉಳಿದವನ್ನು ಪಾಲಿಸಬೇಕಿದೆ. ಶಿಫಾರಸುಗಳನ್ನು ಜಾರಿ ಮಾಡಲೇಬೇಕು ಎಂದರು.

ಬಳ್ಳಾರಿ ಘಟನೆ: ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಪ್ರಕರಣವನ್ನು ಸಿಐಡಿ ಗೆ ವಹಿಸಲಾಗಿದೆ. ಬಳ್ಳಾರಿ ಸೂಕ್ಷ್ಮ ಪ್ರದೇಶವಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ . ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ* ಕೈಗೊಳ್ಳಲಾಗುವುದು ಎಂದರು.

ರಾಜೀವ್ ಗೌಡರನ್ನು ಬಂಧಿಸಲಾಗುವುದು

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟದ ಪೌರಾಯುಕ್ತರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು ಅವರು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲಾಗುವುದು. ಅವರ ಮೇಲೆ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಪಕ್ಷದವರಾಗಲಿ, ಕಾನೂನಿಗಿಂತ ಯಾರೂ ಮೇಲಲ್ಲ ಎಂದರು.

BREAKING: ಪೌರಾಯುಕ್ತೆಗೆ ನಿಂದಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಜಾಮೀನು ಮಂಜೂರು

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !

19/02/2026 7:08 AM1 Min Read

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM2 Mins Read

BIG NEWS : 26 ತಿಂಗಳ ಹಿಂಬಾಕಿಗೆ ಸರ್ಕಾರದ ಭರವಸೆಗೂ ಮಣಿಯದ ಸಾರಿಗೆ ನೌಕರರು : ಇಂದು ಬೆಂಗಳೂರು ಚಲೋ, ಬಸ್ ಸೇವೆಯಲ್ಲಿ ವ್ಯತ್ಯಯ !

19/02/2026 6:45 AM3 Mins Read
Recent News

SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !

19/02/2026 7:08 AM

ಕಿರಣಾ ಹಿಲ್ಸ್ ಮೇಲೆ ವಿನಾಶದ ಮಳೆ: ‘ಆಪರೇಷನ್ ಸಿಂಧೂರ್’ ರಹಸ್ಯ ಈಗ ಬಹಿರಂಗ!

19/02/2026 7:04 AM

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM

ಊಟದ ಸಮಯದಲ್ಲಿ ನೀರು ಕುಡಿಯುವುದು ಒಳ್ಳೆಯದೇ ಅಥವಾ ಕೆಟ್ಟದ್ದೇ? ಇಲ್ಲಿದೆ ನಿಮ್ಮ ಅನುಮಾನಕ್ಕೆ ಉತ್ತರ…!

19/02/2026 6:51 AM
State News
KARNATAKA

SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !

By kannadanewsnow5719/02/2026 7:08 AM KARNATAKA 1 Min Read

ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡಲು ಇಳಿದಿದ್ದ ಕಾರ್ಮಿಕ ಹಾಗೂ ಮನೆಯ…

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM

BIG NEWS : 26 ತಿಂಗಳ ಹಿಂಬಾಕಿಗೆ ಸರ್ಕಾರದ ಭರವಸೆಗೂ ಮಣಿಯದ ಸಾರಿಗೆ ನೌಕರರು : ಇಂದು ಬೆಂಗಳೂರು ಚಲೋ, ಬಸ್ ಸೇವೆಯಲ್ಲಿ ವ್ಯತ್ಯಯ !

19/02/2026 6:45 AM

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

19/02/2026 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.