ಬೆಂಗಳೂರು : ಮಹಿಳೆ ನಾಪತ್ತೆ ವಿಚಾರವಾಗಿ ವ್ಯಕ್ತಿಗೆ ಪೊಲೀಸರ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಪೊಲೀಸರ ಕಿರುಕುಳದಿಂದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಕೆಲಸ ಮಾಡುತ್ತಿದ್ದ ತೋಟದಲ್ಲಿಯೇ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೈಲಾಪುರ ಗ್ರಾಮದ ಮಂಜುನಾಥ್ (44) ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಳೆದ ಎಂಟು ದಿನಗಳಿಂದ ತೋಟದ ಕೆಲಸಕ್ಕೆ ಬರುತ್ತಿದ್ದ ಅಶ್ವಿನಿ ಎನ್ನುವ ಮಹಿಳೆ ನಾಪತ್ತೆಯಾಗಿರುವ ಪ್ರಕರಣ ಸಂಬಂಧ ಪೊಲೀಸರು ಮಂಜುನಾಥನನ್ನು ವಿಚಾರಣೆಗೆ ಕರೆದಿದ್ದರು. ಮಹಿಳೆ ಜೊತೆ ಸಂಬಂಧ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ಮಂಜುನಾಥನನ್ನು ವಿಚಾರಣೆ ಒಳಪಡಿಸಿದ್ದಾರೆ.
ಈ ವೇಳೆ ಮಂಜುನಾಥ ಪೊಲೀಸರ ವಿಚಾರಣೆ ಮುಗಿಸಿ ಬಂದಿದ್ದು ನಂತರ ತೋಟದ ಬಳಿಯ ನೇಣು ಬಿಗಿದೆ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಂದೆ ಸಾವಿಗೆ ಪೊಲೀಸರೇ ಕಾರಣ ಎಂದು ಮಕ್ಕಳು ಆರೋಪಿಸಿದ್ದಾರೆ. ಕಾನ್ಸ್ಟೇಬಲ್ ಅಂಬರೀಶ್ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಸಂಬಂಧಿಕರು ಮಂಜುನಾಥ್ನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಸ್ಥಳದಲ್ಲಿ ಕುಟುಂಬದ ಸದಸ್ಯರ ಕಂದನ ಮುಗಿಲು ಮುಟ್ಟಿದೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








