ಮೈಸೂರು: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಗೆ ಪೊಲೀಸರು ನೋಟಿಸ್ ನೀಡಿ ಶಾಕ್ ಕೊಟ್ಟಿದ್ದಾರೆ. ಕಾರಣ ಏನು? ಯಾಕೆ ಎನ್ನುವ ಬಗ್ಗೆ ಮುಂದೆ ಓದಿ.
ಮೈಸೂರಲ್ಲಿ ಅಕ್ಟೋಬರ್.9ರಂದು ಬಾಲಕಿಯ ಮೇಲೆ ರೇಪ್ ಅಂಡ್ ಮರ್ಡರ್ ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ ಆರೋಪಿ ಬಂಧಿಸಿದಂತ ವಿಚಾರದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾರಾಜು ಅನುಮಾನ ವ್ಯಕ್ತಪಡಿಸಿದ್ದರು. ಇದು ಭಾರೀ ವೈರಲ್ ಕೂಡ ಆಗಿತ್ತು.
ಈ ಹಿನ್ನಲೆಯಲ್ಲಿ ಬಿಜೆಪಿಯ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾ ರಾಜು ಅವರಿಗೆ ಮೈಸೂರು ನಗರ ದೇವರಾಜ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಹಾಗೂ ತನಿಖಾಧಿಕಾರಿಯು ನೋಟಿಸ್ ನೀಡಿದ್ದಾರೆ.
ಪೊಲೀಸರು ನೀಡಿರುವಂತ ನೋಟಿಸ್ ನಲ್ಲಿ ಅ.9, 2025ರಂದು ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾದಂತ ಪ್ರಕರಣ ಸಂಬಂಧ ತಾವು ಅಮೋಘ ಕರ್ನಾಟಕ ಎನ್ನುವಂತ ಸಾಮಾಜಿಕ ಜಾಲತಾಣದಲ್ಲಿ ನಿಜವಾದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ಆರೋಪಿ ಅರೆಸ್ಟ್ ಮಾಡಿದ ಬಗ್ಗೆ ನಮಗೆ ವಿಶ್ವಾಸವಿಲ್ಲ. ಈ ಬಗ್ಗೆ ತನಿಖೆಯಾಗಬೇಕು ಎಂಬುದಾಗಿ ಹೇಳಿಕೆ ನೀಡಿದ್ದೀರಿ. ಈ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಎಂದಿದ್ದಾರೆ.
ಈ ಪ್ರಕರಣವು ಘೋರ, ಅತೀ ಸೂಕ್ಷ್ಮ ಹಾಗೂ ಗಂಭೀರವಾದದ್ದು ಆಗಿದೆ. ತನಿಖೆಯು ವೈಜ್ಞಾನಿಕವಾಗಿ ಹಾಗೂ ಪಾರದರ್ಶಕವಾಗಿ ನಡೆಯುತ್ತಿದೆ. ಆದರೇ ನೀವು ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡಿ, ಪ್ರಚಾರದ ಗೀಳಿಗಾಗಿ ಆಧಾರ ರಹಿತವಾದಂತ ಹೇಳಿಕೆ ನೀಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ ಎಂದು ಹೇಳಿದ್ದಾರೆ.
ಈ ಎಲ್ಲಾ ಕಾರಣದಿಂದ ನಿಮ್ಮ ಮೇಲೆ ಏಕೆ ಕ್ರಮವನ್ನು ತೆಗೆದುಕೊಳ್ಳಬಾರದು ಎಂಬುದನ್ನು ಈ ಮೂಲಕ ನಿಮಗೆ ನೋಟಿಸ್ ನೀಡಲಾಗಿದೆ. ಈ ನೋಟಿಸು ತಲುಪಿದ ಕೂಡಲೇ ತನಿಖಾಧಿಕಾರಿಯ ಮುಂದೆ ಹಾಜರಾಗಿ ನಿಮ್ಮ ಹೇಳಿಕೆ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ.
ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 2,500 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ
ಸಾಧನೆ ಮೂಲಕ ಮಾತನಾಡಲು ಪ್ರಿಯಾಂಕ್ ಖರ್ಗೆಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸವಾಲು








