‘ಕನೌಜ್: ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಆಲೂಗಡ್ಡೆ ಲಂಚ ಕೇಳುತ್ತಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಉತ್ತರ ಪ್ರದೇಶ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ.
ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಕನೌಜ್ನ ಸೌರಿಖ್ ಪೊಲೀಸ್ ಠಾಣೆಯ ಚಾಪುನ್ನಾ ಹೊರಠಾಣೆಯ ಉಸ್ತುವಾರಿ ಸಬ್ ಇನ್ಸ್ಪೆಕ್ಟರ್ ರಾಮ್ಕೃಪಾಲ್ ಲಂಚ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ಆಡಿಯೊದಿಂದ ತಿಳಿದುಬಂದಿದೆ.’
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕನೌಜ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಆನಂದ್ ಅವರು ಹೊರಠಾಣೆಯ ಉಸ್ತುವಾರಿ ರಾಮ್ಕೃಪಾಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ ಎಂದು ಎಎಸ್ಪಿ ತಿಳಿಸಿದ್ದಾರೆ.