ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಕೊಟ್ಟು, ಜನರಿಗೆ ಕಟ್ಟೋದಕ್ಕೆ ಕಿರುಕುಳ ನೀಡೋದು ಜಾಸ್ತಿಯಾಗಿತ್ತು. ಈ ಕಾರಣಕ್ಕೆ ಕೆಲವೆಡೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ಈ ಬೆನ್ನಲ್ಲೇ ಸೂಕ್ತ ಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೇ ಅಲರ್ಟ್ ಆಗಿರುವಂತ ಪೊಲೀಸರು ಐದು ಮೆಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ತವರು ಕ್ಷೇತ್ರದಲ್ಲೇ ಬಾಲ ಬಿಚ್ಚಿದಂತ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ಸಾಲ ಪಡೆದವರಿಗೆ ಕಿರುಕುಳ ನೀಡುತ್ತಿದ್ದಂತ ಐದು ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮೈಸೂರಿನ ಮೇಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತೆ ಆತ್ಮಹತ್ಯೆ ಮಾಡಿಕೊಂಡ ಸಂಬಂಧ ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಇದಲ್ಲದೇ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಧರ್ಮಸ್ಥಳ ಮಹಿಳಾ ಸ್ವಸಹಾಯ ಸಂಘ ಸೇರಿ ಐದು ಖಾಸಗಿ ಫೈನಾನ್ಸ್ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
BIG NEWS: ಪೊಲೀಸರು ವಾಟ್ಸಾಪ್ ಅಥವಾ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ನೋಟಿಸ್ ನೀಡಬಾರದು: ಸುಪ್ರೀಂ ಕೋರ್ಟ್
ರಾಜ್ಯ ಸರ್ಕಾರದಿಂದ ಗ್ರಾಮ ಲೆಕ್ಕಿಗರು, ಸಹಾಯಕರಿಗೆ ಗುಡ್ ನ್ಯೂಸ್: ಪ್ರೋತ್ಸಾಹ ಧನ ವಿತರಣೆ