ಬೆಂಗಳೂರು: ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಇಸ್ಪೀಟ್ ಆಟದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳು ವೈರಲ್ ಆಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಹಾಗೂ ಠಾಣೆಯ ಸಬ್ ಇನ್ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಇಸ್ಪೀಟ್ ಆಟದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳು ತಮ್ಮ ಗಮನಕ್ಕೆ ಬಂದ ತಕ್ಷಣವೇ ಈ ಕುರಿತು ವಿಚಾರಣೆ ನಡೆಸಿ ಅಗತ್ಯ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೆ ಎಂದು ಹೇಳಿರುವ ಸಚಿವರು ಈ ಬಗ್ಗೆ ವಿಚಾರಣೆ ನಡೆಸಿದಾಗ ಈ ಪ್ರಕರಣ ಹಲವು ತಿಂಗಳ ಹಿಂದೆ ನಡೆದದ್ದು ಎಂದು ತಿಳಿದು ಬಂದಿರುತ್ತದೆ ಎಂದು ಹೇಳಿದ್ದಾರೆ.
ಇಲಾಖೆಯ ಯಾವುದೇ ಸಿಬ್ಬಂದಿ, ಅಧಿಕಾರಿಗಳ ಶಿಸ್ತು ಉಲ್ಲಂಘನೆಯನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಸಾರ್ವಜನಿಕ ಸೇವೆಯಲ್ಲಿ ಹಾಗೂ ಕಾನೂನು ಪಾಲನೆಯಲ್ಲಿ ಲೋಪವನ್ನು ಸಹಿಸಲು ಸಾಧ್ಯವಿಲ್ಲ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
‘ತ್ರಿಭಾಷಾ ಸೂತ್ರ’ದಡಿ ಯಾವುದೇ ರಾಜ್ಯದ ಮೇಲೆ ‘ಭಾಷಾ ಒತ್ತಡ’ ಹೇರುವಂತಿಲ್ಲ: ಶಿಕ್ಷಣ ಸಚಿವಾಲಯ ಸ್ಪಷ್ಟನೆ
ಆರೋಗ್ಯ ವಿಮೆ ತಿರಸ್ಕರಿಸಿದ ಕಂಪನಿಗೆ ರೂ.1,80,000 ಪರಿಹಾರದ ಜೊತೆ ದಂಡ ನೀಡಲು ಕೋರ್ಟ್ ಆದೇಶ