ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು, ನಮ್ಮ ಮೆಟ್ರೋ 3ನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸುವ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶನಕ್ಕೆ ಪ್ಲ್ಯಾನ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಎನ್ಎಸ್ ಯುಐ ಮುಖಂಡರನ್ನು ಪೊಲೀಸರು ಬಂಧಿಸಿ ಗೃಹಬಂಧನದಲ್ಲಿ ಇರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಾಗುವಂತ ಮಾರ್ಗದಲ್ಲಿ ಕಪ್ಪು ಬಾವುಟ ಪ್ರದರ್ಶನಕ್ಕೆ ಪ್ಲ್ಯಾನ್ ನಡೆಸಲಾಗಿತ್ತು. ಕಪ್ಪು ಬಾವುಟ ಪ್ರದರ್ಶನದ ಬಗ್ಗೆ ಮಾಹಿತಿಯನ್ನು ಪೊಲೀಸರು ಪಡೆದುಕೊಂಡಿದ್ದರು. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎನ್ ಎಸ್ ಯು ಐ ಮುಖಂಡರನ್ನು ಬಂಧಿಸಿ, ಪೊಲೀಸರು ಗೃಹ ಬಂಧನದಲ್ಲಿ ಇರಿಸಿದ್ದಾರೆ.
ಎನ್ ಎಸ್ ಯು ಐ ಅಧ್ಯಕ್ಷ ಕೀರ್ತಿ ಗಣೇಶ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ ಅವರನ್ನು ಬಂಧಿಸಿ ಗೃಹ ಬಂಧನದಲ್ಲಿ ಪೊಲೀಸರು ಇರಿಸಿದ್ದಾರೆ. ಅಲ್ಲದೇ ಮನೆಯಿಂದ ಪ್ರತಿಭಟನೆಗೆ ತೆರಳದಂತೆ ತಡೆಯನ್ನು ಪೊಲೀಸರು ಒಡ್ಡಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನಂಥ ನಗರಗಳನ್ನು ಭವಿಷ್ಯಕ್ಕಾಗಿ ರೂಪಿಸಬೇಕಿದೆ: ಪ್ರಧಾನಿ ಮೋದಿ | PM Modi