ಬೆಂಗಳೂರು: ದಕ್ಷಿಣ ಬೆಂಗಳೂರಿನ ರೌಡಿ ಶೀಟರ್ ಗಳ ಮನೆಗಳ ಮೇಲೆ ನಗರ ಪೊಲೀಸರು ಗುರುವಾರ ಮುಂಜಾನೆ ದಿಢೀರ್ ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ದಾಳಿಗಳನ್ನು ನಡೆಸಲಾಯಿತು.
ದಕ್ಷಿಣ ಬೆಂಗಳೂರು ವ್ಯಾಪ್ತಿಯ ಮೂರು ಉಪ ವಿಭಾಗಗಳ ಪೊಲೀಸ್ ಠಾಣೆಗಳ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು.
234 ಮನೆಗಳನ್ನು ಪರಿಶೀಲಿಸಲಾಗಿದ್ದು, 177 ರೌಡಿಗಳು ಗೈರು ಹಾಜರಾಗಿದ್ದರು. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳನ್ನು ಸಹ ಪರಿಶೀಲಿಸಲಾಗಿದೆ.
ಸುಬ್ರಮಣ್ಯಪುರ ಉಪವಿಭಾಗದಲ್ಲಿ 125, ವಿವಿ ಪುರಂನಲ್ಲಿ 76 ಮತ್ತು ಜಯನಗರದಲ್ಲಿ 33 ಮನೆಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.
ರೌಡಿ ಶೀಟರ್ ಗಳ ಮನೆಗಳಲ್ಲಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿರುವುದನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ತಪಾಸಣೆ ನಡೆಸಲಾಯಿತು. ಆದರೆ, ಅಂತಹ ಯಾವುದೇ ಶಸ್ತ್ರಾಸ್ತ್ರಗಳು ಕಂಡುಬಂದಿಲ್ಲ