ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಮತ್ತೊಮ್ಮೆ ಪೋಲಿಸರು ಸಮರ ಸಾರಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ, ಕರ್ನಾಟಕ ಮತ್ತು ದೆಹಲಿಯ ಶಾಹೀನ್ ಬಾಗ್ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್ಐನ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ.

BIGG NEWS : ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರಸನ್ಮಾನ : ಇಂದು ವಿಧಾನಸೌಧದ ಎಲ್ಲಾ ಸಿಬ್ಬಂದಿಗಳಿಗೆ ರಜೆ ಘೋಷಣೆ

 

ಬಾಗಲಕೋಟೆ, ಬೀದರ್​, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾ., ಮೈಸೂರು, ವಿಜಯಪುರ ಸೇರಿದಂತೆ ರಾಜ್ಯಾದ್ಯಂತ ಪಿಎಫ್​​ಐ ಮುಖಂಡರ ಮನೆ ಮೇಲೆ ದಾಳಿ ನಡೆದಿದೆ. ಕಳೆದ ದಿನಗಳ ಹಿಂದೆ ಅಷ್ಟೇ ಎನ್‌ ಐಎ ದಾಳಿ ನಡೆಸಿತ್ತು. ಈ ವೇಳೆ ಸುಮಾರು ನೂರಕ್ಕೂ ಹೆಚ್ಚು ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿತ್ತು. ಈಗ ಮತ್ತೆ ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ.ಬಾಗಲಕೋಟೆ
ಬಾಗಲಕೋಟೆ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ PFI ಮುಖಂಡರ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಈ ವೇಳೆ 7 ಜನ ಪಿಎಫ್​ಐ ಹಾಗೂ ಎಸ್​ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
ಉಡುಪಿ
ಉಡುಪಿ ಜಿಲ್ಲೆಯ ಹೂಡೆ, ಕುಂದಾಪುರ, ಗಂಗೊಳ್ಳಿ ಸೇರಿದಂತೆ ನಾಲ್ಕ ಕಡೆಗಳಲ್ಲಿ ದಾಳಿ ನಡೆಸಿರುವ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್​ಐನ ಸ್ಥಳೀಯ ಮುಖಂಡರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

BIGG NEWS : ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರಸನ್ಮಾನ : ಇಂದು ವಿಧಾನಸೌಧದ ಎಲ್ಲಾ ಸಿಬ್ಬಂದಿಗಳಿಗೆ ರಜೆ ಘೋಷಣೆ

 

ವಿಜಯಪುರ
ವಿಜಯಪುರ ನಗರದಲ್ಲಿ ಜಿಲ್ಲಾ ಪೊಲೀಸರು ಪಿಎಫ್ಐ ಮುಖ್ಯಸ್ಥನನ್ನು ವಶಕ್ಕೆ ಪಡೆದಿದ್ದಾರೆ. ನಗರದ ಜಿಎಂ ರಸ್ತೆಯಲ್ಲಿರೋ ಅಶ್ಪಾಕ್ ಜಮಖಂಡಿ ಮನೆಯಲ್ಲಿದ್ದ ವೇಳೆ ಆತನನ್ನು ವಶಕ್ಕೆ ಪಡೆಯಲಾಗಿದೆ. ಚಾರಣೆ ಬಳಿಕ ಅವಶ್ಯಕತೆ ಬಿದ್ದರೆ ಅಶ್ಪಾಕ್ ಜಮಖಂಡಿಯನ್ನು ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ.
ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮುಖಂಡರ ಮನೆ ಮೇಲೆ ದಾಳಿ ನಡೆಸಿ 10 PFI ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಮನಗರ
ರಾಮನಗರದಲ್ಲಿ‌‌ 9 ಜನ, ಚನ್ನಪಟ್ಟಣದಲ್ಲಿ ‌6 ಜನ ಸೇರಿದಂತೆ 15 ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಲಾರ
ಕೋಲಾರದಲ್ಲಿ ನವಾಜ್ ಪಾಷಾ, ವಸೀಂ‌ ಪಾಷಾ, ಸಿದ್ದಿಕ್ ಪಾಷಾ, ಅಲ್ಲಾಭಕ್ಷ್ ಇಂತಿಯಾಜ್ ಪಾಷಾ, ಶಾಬಾಜ್ ಪಾಷಾ ಸೇರಿದಂತೆ 6 ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಶಿವಮೊಗ್ಗ ಜಿಲ್ಲೆಯಲ್ಲಿ ಐವರು ಪಿಎಫ್​ಐ ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ
ಬೆಳಗಾವಿ ಜಿಲ್ಲೆಯಲ್ಲಿ ಪಿಎಫ್ಐ ಮುಖಂಡರ ಮೇಲಿನ ದಾಳಿ ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದ ಐವರು ಪಿಎಫ್ಐ ಮುಖಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಉಪ ಆಯುಕ್ತ (ಡಿಸಿಪಿ) ರವೀಂದ್ರ ಗಡಾದಿ ನೇತೃತ್ವದಲ್ಲಿ ಇಂದು ಬೆಳ್ಳಂಬೆಳಗ್ಗೆ 4 ಗಂಟೆಗೆ ಪಿಎಫ್ಐ ಮುಖಂಡರ ಪಟ್ಟಿ ಮಾಡಿಕೊಂಡು ದಾಳಿ ನಡೆಸಿದ್ದಾರೆ. ಈ ವೇಳೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಚಾಮರಾಜನಗರ
ಚಾಮರಾಜನಗರ ಜಿಲ್ಲೆಯಲ್ಲಿ PFI ಜಿಲ್ಲಾಧ್ಯಕ್ಷ ಕಪಿಲ್, ಕಾರ್ಯದರ್ಶಿ ಸುಯೇಬ್ ಸೇರಿ ಇಬ್ಬರು ಪಿಎಫ್​ಐ ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ.
ರಾಯಚೂರು
ರಾಯಚೂರಿನಲ್ಲೂ ಮೊಹ್ಮದ್ ಇಸ್ಮಾಯಿಲ್, ಆಸೀಂ ಸೇರಿ ಇಬ್ಬರು PFI ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

BIGG NEWS : ರಾಜ್ಯದಲ್ಲಿ `ಒಂದು ಆವರಣದಲ್ಲಿ ಒಂದೇ ಶಾಲೆ’ ನಡೆಸುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ

 

ಚಿತ್ರದುರ್ಗ
ಚಿತ್ರದುರ್ಗದಲ್ಲಿ ಪಿಎಫ್​ಐ ಮುಖಂಡ ಅರ್ಫಾನ್ ಅಲಿಯನ್ನು ಬಂಧಿಸಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿಯಾದ ಆರೋಪದಡಿ ನಗರದ ಚಿಕ್ಕಪೇಟೆ ಬಡಾವಣೆ ನಿವಾಸಿ ಅರ್ಫಾನ್ ಅಲಿ ಅರೆಸ್ಟ್ ಮಾಡಲಾಗಿದೆ. ಎಸ್​​ಪಿ ಹಾಗೂ ಡಿವೈಎಸ್​​ಪಿ, ಸಿಪಿಐ ನೇತೃತ್ವದಲ್ಲಿ ಕೋಟೆ ಠಾಣೆಯಲ್ಲಿ ಅರ್ಫಾನ್ ಅಲಿ ವಿಚಾರಣೆ ನಡೆಸಲಾಗುತ್ತಿದೆ. ಹಾಗೂ ಹುಬ್ಬಳ್ಳಿಯಲ್ಲಿ 9ಕ್ಕೂ ಹೆಚ್ಚು PFI, SDPI ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

Share.
Exit mobile version